ರಾಷ್ಟ್ರಮಟ್ಟದಲ್ಲಿ ಯಡಿಯೂರಪ್ಪಗೆ ದೊಡ್ಡ ಜವಾಬ್ದಾರಿ: BSYರ ಹಿರಿತನ ಪರಿಗಣಿಸಿದ ಬಿಜೆಪಿ

BSY
Published on

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಯಲ್ಲಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಸ್ಥಾನ ನೀಡಲಾಗಿದೆ. 11 ಸದಸ್ಯರನ್ನೊಳಗೊಂಡ ಕೇಂದ್ರ ಬಿಜೆಪಿ ಚುನಾವಣಾ ಸಮಿತಿಯನ್ನು ಪುನರ್​ ರಚಿಸಲಾಗಿದ್ದು, ಈ ಸಮಿತಿಯ ಟಾಪ್​ 5ನೇ ಸ್ಥಾನದಲ್ಲಿ ಯಡಿಯೂರಪ್ಪ ಅವರ ಹೆಸರಿದೆ.

ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅಧಿಕೃತ ಆದೇಶ ಹೊರಡಿಸಿದ್ದಾರೆ. ಆ ಮೂಲಕ ಯಡಿಯೂರಪ್ಪ ಅವರನ್ನ ಕಡೆಗಣಿಸಿಲ್ಲ ಎಂದು ಹೈಕಮಾಂಡ್​ ಸಂದೇಶ ರವಾನಿಸಿದೆ. ಯಡಿಯೂರಪ್ಪ ಅವರ ಹಿರಿತನ ಪರಿಗಣಿಸಿದ ಬಿಜೆಪಿ ಹೈಕಮಾಂಡ್, ರಾಷ್ಟ್ರಮಟ್ಟದ ದೊಡ್ಡ ಜವಾಬ್ದಾರಿಯನ್ನು ನೀಡಿದೆ. ಈ ಸಮಿಯಲ್ಲಿ ಜೆ.ಪಿ.ನಡ್ಡಾ, ನರೇಂದ್ರ ಮೋದಿ, ರಾಜ​ನಾಥ್​ ಸಿಂಗ್​, ಅಮಿತ್​ ಷಾ, ಯಡಿಯೂರಪ್ಪ ಸೇರಿದಂತೆ 11 ನಾಯಕರಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ನಳಿನ್ ಕುಮಾರ್​ ಕಟೀಲ್, ಕೇಂದ್ರದ ಸಂಸದೀಯ ಮಂಡಳಿ ಪುನರ್ ರಚನೆ ಆಗಿದೆ. ಕರ್ನಾಟಕದಿಂದ ಯಡಿಯೂರಪ್ಪ ಅವರಿಗೆ ಹೈಕಮಾಂಡ್​ ಉನ್ನತ ಮಟ್ಟದ ಸ್ಥಾನ ನೀಡಿದೆ. ಯಡಿಯೂರಪ್ಪ ಮತ್ತು ಜೆ.ಪಿ.ನಡ್ಡಾ ಅವರಿಗೆ ಅಭಿನಂದನೆ ಸಲ್ಲಿಸುವೆ. ಕೇಂದ್ರದಲ್ಲಿ ನಮ್ಮ ಪರವಾಗಿ ಧ್ವನಿ ಎತ್ತಲು, ನಮ್ಮಪರ ನಿರ್ಣಯ ತೆಗೆದುಕೊಳ್ಳಲು ಯಡಿಯೂರಪ್ಪ ಅವರಿಗೆ ಅನುಕೂಲವಾಗಿದೆ ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net