ಚಿತ್ರದುರ್ಗದಲ್ಲಿ ವ್ಯಕ್ತಿಯ ಚರ್ಮದ ಮೇಲೆ ಬ್ಲ್ಯಾಕ್​ ಫಂಗಸ್​ ಪತ್ತೆ, ಇದು ದೇಶದಲ್ಲೇ ಮೊದಲ ಪ್ರಕರಣ

skin fungus
Published on

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಚರ್ಮದ ಮೇಲೆ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು, ಇದು ಭಾರತದಲ್ಲೇ ಮೊಟ್ಟ ಮೊದಲ ಪ್ರಕರಣ ಎನ್ನುತ್ತಿದೆ ವೈದ್ಯರ ತಂಡ.

ಒಂದು ತಿಂಗಳ ಹಿಂದೆ ಕೋವಿಡ್ ಸೋಂಕಿನಿಂದ ಗುಣಮುಖನಾಗಿದ್ದ ಚಿತ್ರದುರ್ಗದ 50 ವರ್ಷದ ರೋಗಿಯಲ್ಲಿ ಸ್ಕಿನ್ ಮ್ಯೂಕರ್ ಮೈಕೋಸಿಸ್ ಪತ್ತೆಯಾಗಿದೆ. ಮಧುಮೇಹದಿಂದ ಬಳಲುತ್ತಿದ್ದ ಈ ವ್ಯಕ್ತಿಗೆ ಬಲ ಭಾಗದ ಕಿವಿ ಸಮೀಪ ಚರ್ಮದ ಕಪ್ಪು ಶಿಲೀಂಧ್ರ ರೋಗ ಕಾಣಿಸಿಕೊಂಡಿದೆ.

ಚಿತ್ರದುರ್ಗ ನಗರದ ಕರ್ನಾಟಕ ಕಿವಿ, ಮೂಗು ಗಂಟಲು ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಇಎನ್​ಟಿ ತಜ್ಞ ಡಾ.ಎನ್.ಬಿ. ಪ್ರಹ್ಲಾದ್ ಅವರು ರೋಗಿಗೆ ಶಸ್ತ್ರ ಚಿಕಿತ್ಸೆ ಮೂಲಕ ಬ್ಲ್ಯಾಕ್ ಫಂಗಸ್ ಆಗಿದ್ದ ಭಾಗವನ್ನ ತೆರವು ಮಾಡಿದ್ದಾರೆ. ಮೊದಲ ಹಂತದ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಎರಡನೇ ಹಂತದ ಶಸ್ತ್ರ ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net