ಗುಂಡ್ಲುಪೇಟೆ: ತಾಲೂಕಿನ ಬೊಮ್ಮಲಾಪುರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಅಭಿಮಾನಿ ರವಿ ಮನೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ.

ಶುಕ್ರವಾರ ಬೆಳಗ್ಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮುಖಾಂತರ ಗುಂಡ್ಲುಪೇಟೆ ಪಟ್ಟಣಕ್ಕೆ ಆಗಮಿಸಲಿರುವ ಯಡಿಯೂರಪ್ಪ ಅವರನ್ನು ಪಟ್ಟಣದಿಂದ ಬೈಕ್ ರ್ಯಾಲಿ ಮೂಲಕ ಬೊಮ್ಮಲಾಪುರ ಗ್ರಾಮಕ್ಕೆ ಕರೆದುಕೊಂಡು ಹೋಗಲು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಸಿದ್ಧತೆ ಕೈಗೊಂಡಿದ್ದಾರೆ.
ಬೆಳಗ್ಗೆ 10 ಗಂಟೆಗೆ ದೇವರಾಜ ಅರಸು ಕ್ರೀಡಾಂಗಣದ ಬಳಿ ಯಡಿಯೂರಪ್ಪ ಅವರನ್ನು ಶಾಸಕ ಸಿ.ಎಸ್.ನಿರಂಜನ್ ಕುಮಾರ್ ನೇತೃತ್ವದಲ್ಲಿ ಸ್ವಾಗತಿಸಲಾಗುತ್ತಿದೆ.
ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಕೊಟ್ಟಿದ್ದಕ್ಕೆ ಮನನೊಂದ ಬೊಮ್ಮಲಾಪುರದ ರವಿ (35) ಆ ದಿನ ರಾತ್ರಿಯೇ ಆತ್ಮಹತ್ಯೆ ಮಾಡಿಕೊಂಡಿದ್ದ. ಹೋಟೆಲ್ನಲ್ಲಿ ಕೆಲಸ ಮಾಡಿಕೊಂಡಿದ್ದ ರವಿ, ಯಡಿಯೂರಪ್ಪನವರ ಅಪ್ಪಟ ಅಭಿಮಾನಿಯಾಗಿದ್ದ. ಯಡಿಯೂರಪ್ಪ ಮೇಲೆ ರವಿ ಇಟ್ಟಿದ್ದ ಅಭಿಮಾನ ಕಂಡು ಊರಿನ ಜನ ಅವನನ್ನು ರಾಜಾಹುಲಿ ಎಂದೇ ಕರೆಯುತ್ತಿದ್ದರು. 2017ರಲ್ಲಿ ನಡೆದ ಉಪಚುನಾವಣೆಗೆ ಹಾಲಿ ಶಾಸಕ ನಿರಂಜನ್ ಕುಮಾರ್ ಪರ ಬಿ.ಎಸ್.ಯಡಿಯೂರಪ್ಪ ಪ್ರಚಾರ ಮಾಡಲು ಗುಂಡ್ಲುಪೇಟೆಗೆ ಆಗಮಿಸಿದ್ದರು. ಈ ವೇಳೆ ಅವರ ಜತೆಗೆ ರವಿ ಊರುಕೇರಿಗಳನ್ನು ಸುತ್ತಿದ್ದ. ಮಾತು ಮಾತಿಗೂ ಯಡಿಯೂರಪ್ಪ ಜಪ ಮಾಡುತ್ತಿದ್ದ. ಸಿಎಂ ಸ್ಥಾನಕ್ಕೆ ಬಿಎಸ್ವೈ ರಾಜೀನಾಮೆ ಕೊಡುತ್ತಿದ್ದಂತೆ ಮಂಕಾಗಿದ್ದ. ರಾಜೀನಾಮೆ ಘೋಷಣೆಯ ವಿಡಿಯೋವನ್ನು ಪದೇಪದೆ ನೋಡಿದ ರವಿ, ಯಡಿಯೂರಪ್ಪ ಅವರು ಕಣ್ಣೀರು ಸುರಿಸಿದ್ದು ಬೇಸರ ತಂದಿದೆ ಎಂದು ಗ್ರಾಮಸ್ಥರ ಬಳಿಯೂ ಹೇಳಿಕೊಂಡಿದ್ದ. ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದ.
ಸಿಎಂ ಬೆಂಗಾವಲು ವಾಹನಕ್ಕೆ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕಾರು ಡಿಕ್ಕಿ!
ನಾನು ಮಾಜಿ ಸಿಎಂ, ಬೊಮ್ಮಾಯಿ ಸಂಪುಟದಲ್ಲಿ ಮಂತ್ರಿ ಆಗಲ್ಲ… ಸ್ವಾಭಿಮಾನ ನನಗೂ ಇದೆ: ಜಗದೀಶ ಶೆಟ್ಟರ್
ಕಿಡ್ನ್ಯಾಪ್ ಆಗಿದ್ದ ಕೇರಳ ಯುವಕನನ್ನು ಪ್ರಾಣದ ಹಂಗು ತೊರೆದು ಕಾಪಾಡಿದ ಹಾಸನ ಪೊಲೀಸರು! ವಿಡಿಯೋ ವೈರಲ್
ಬೊಮ್ಮಾಯಿ ಸಂಪುಟದಲ್ಲಿ ಯಾರಿಗೆ ಕೊಕ್? ಸಂಭಾವ್ಯ ಸಚಿವರ EXCLUSIVE ಪಟ್ಟಿ ಇಲ್ಲಿದೆ
ಗಂಡನಿಗೆ ಹಣದಾಹ, ಮಾವನಿಗೆ ಕಾಮದಾಹ… ಪೊಲೀಸರ ಮುಂದೆ ನರಕಯಾತನೆ ಬಿಚ್ಚಿಟ್ಟ ಯುವತಿ