ಉಯ್ಯಲೆಯಲ್ಲಿ ಆಡುತ್ತಿದ್ದಾಗ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

Shreesha
Published on

ಬೆಳ್ತಂಗಡಿ: ಮನೆಯಲ್ಲಿ ಉಯ್ಯಲೆಯಲ್ಲಿ ಆಡುತ್ತಿದ್ದ ಸಂದರ್ಭ ಕುತ್ತಿಗೆಗೆ ಹಗ್ಗ ಸಿಲುಕಿ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬುವರ ಪುತ್ರ, 8ನೇ ತರಗತಿ ವಿದ್ಯಾರ್ಥಿ ಶ್ರೀಶ(14) ಮೃತಪಟ್ಟಿದ್ದಾನೆ.

ಭಾನುವಾರ ಸಾಯಂಕಾಲ ಮನೆಯ ಅಂಗಳದಲ್ಲಿ ಉಯ್ಯಲೆಯಲ್ಲಿ ಆಡುತ್ತಿದ್ದಾಗ ಹಗ್ಗ ಆಕಸ್ಮಿಕವಾಗಿ ಕುತ್ತಿಗೆಗೆ ಸಿಲುಕಿದೆ. ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಲಾಯಿತು. ಬೆಳ್ತಂಗಡಿ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಧನರಾಜ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net