ದಾವಣಗೆರೆಯಲ್ಲಿ ಟ್ರಾನ್ಸ್‌ಫಾರ್ಮರ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್​ ಪಲ್ಟಿ: ಪವಾಡ ಸದೃಶ್ಯ ತಪ್ಪಿತು ಭಾರಿ ದುರಂತ

ದಾವಣಗೆರೆ: ಚಾಲಕ ನಿಯಂತ್ರಣ ತಪ್ಪಿದ ಖಾಸಗಿ ಬಸ್​ವೊಂದು ರಸ್ತೆ ಬದಿ ಟ್ರಾನ್ಸ್‌ಫಾರ್ಮರ್‌ ಇದ್ದ ವಿದ್ಯುತ್​ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅದೃಷ್ಟವಶಾತ್​ ಬಸ್​ನಲ್ಲಿದ್ದ 25 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂತಹ ಘಟನೆ ದಾವಣಗೆರೆ ನಗರದ ಎಲೆಬೇತೂರು ಬಳಿ ಬುಧವಾರ ಸಂಭವಿಸಿದೆ. ದಾವಣಗೆರೆಯಿಂದ ಎಲೆಬೇತೂರು ಮಾರ್ಗವಾಗಿ ಜಗಳೂರು ಕಡೆಗೆ ವಿನಾಯಕ ಹೆಸರಿನ ಖಾಸಗಿ ಬಸ್ ತೆರಳುತ್ತಿತ್ತು. ಈ ಬಸ್​ನಲ್ಲಿ 25 ಮಂದಿ ಪ್ರಯಾಣಿಸುತ್ತಿದ್ದರು. ಎಲೆಬೇತೂರು ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್, ರಸ್ತೆ ಬದಿಯ ವಿದ್ಯುತ್​ ಟ್ರಾನ್ಸ್‌ಫಾರ್ಮರ್‌ಗೆ ಡಿಕ್ಕಿ … Continue reading ದಾವಣಗೆರೆಯಲ್ಲಿ ಟ್ರಾನ್ಸ್‌ಫಾರ್ಮರ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್​ ಪಲ್ಟಿ: ಪವಾಡ ಸದೃಶ್ಯ ತಪ್ಪಿತು ಭಾರಿ ದುರಂತ