ಸಾಸ್ವೆಹಳ್ಳಿ: ಸಮೀಪದ ಎಡಿವಿಎಸ್ ಕಾಲೇಜ್ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಬೈಕ್‌ಗೆ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾಸ್ವೆಹಳ್ಳಿ ಪಿಗ್ಮಿ ಸಂಗ್ರಾಹಕ ರಾಜೇಶ್ ಕೆ.ಜಿ.,(45) ಮೃತಪಟ್ಟಿದ್ದಾರೆ.
ಬೆಳಗ್ಗೆ ಎಂದಿನಂತೆ ಪಿಗ್ಮಿ ಸಂಗ್ರಹಕ್ಕೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಎದುರಿಗೆ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ತಲೆ, ಮುಖಕ್ಕೆ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಮೃತರ ಪತ್ನಿ ಮಂಗಳಾ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.