ಸಿಂದಗಿ, ಹಾನಗಲ್​ ವಿಧಾನಸಭೆ ಕ್ಷೇತ್ರಗಳಿಗೆ ಅ.30ರಂದು ಉಪಚುನಾವಣೆ

election
Published on

ಬೆಂಗಳೂರು: ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ.

ಹಾನಗಲ್ ಕ್ಷೇತ್ರದ ಶಾಸಕರಾಗಿದ್ದ ಬಿಜೆಪಿಯ ಸಿ.ಎಂ.ಉದಾಸಿ ಅವರು ಕಳೆದ ಜೂನ್​ 10 ರಂದು ನಿಧನರಾದರು. ಸಿಂದಗಿ ಕ್ಷೇತ್ರದ ಜೆಡಿಎಸ್​ ಶಾಸಕರಾಗಿದ್ದ ಎಂ.ಸಿ.ಮನಗೂಳಿ ಅವರು 2021ರ ಜನವರಿ 26ರಂದು ನಿಧನರಾದರು. ಇವರಿಬ್ಬರಿಂದ ತೆರವಾದ ಎರಡೂ ಸ್ಥಾನಕ್ಕೆ ಅಕ್ಟೋಬರ್ 30ರಂದು ಉಪ ಚುನಾವಣೆ ನಡೆಯಲಿದೆ. ನವೆಂಬರ್ 2 ರಂದು ಮತ ಎಣಿಕೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ಒಟ್ಟು 3 ಲೋಕಸಭಾ ಕ್ಷೇತ್ರ, 30 ವಿಧಾನಸಭಾ ಕ್ಷೇತ್ರಕ್ಕೆ ಅ.30ರಂದು ಉಪಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಕೊನೇ ದಿನ ಅ.8, ನಾಮಪತ್ರ ಪರಿಶೀಲನೆ ಕಾರ್ಯ ಅ.11ಕ್ಕೆ ನಡೆಯಲಿದೆ. ನಾಮಪತ್ರ ಹಿಂಪಡೆಗೆ ಕೊನೇ ದಿನ ಅ.13.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net