ಮರಕ್ಕೆ ಕಾರು ಡಿಕ್ಕಿ, ಮೂವರು ಯುವಕರ ದುರ್ಮರಣ

accident
Published on

ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ದುರ್ಮರಣಕ್ಕೀಡಾದ ಘಟನೆ ತಿ.ನರಸೀಪುರ ತಾಲೂಕಿನ ನೆರಗ್ಯಾತನಹಳ್ಳಿಯಲ್ಲಿ ಸಂಭವಿಸಿದೆ.

ತಿ.ನರಸೀಪುರ ತಾಲೂಕಿನ ಹಸುವಟ್ಟಿ ಗ್ರಾಮದ ಸುರೇಶ್(26), ಕಿರಣ್ (25) ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಯುವಕ ಅಜಯ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net