ಲಾರಿಗೆ ಕಾರು ಡಿಕ್ಕಿ, ಸ್ಥಳದಲ್ಲೇ ಯುವಕರಿಬ್ಬರ ದುರ್ಮರಣ

accident
Published on

ವಿಜಯನಗರ: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ದುರ್ಮರಣಕ್ಕೀಡಾದ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ.

ಹೊಸಪೇಟೆ ತಾಲೂಕಿನ ಹನುಮನಹಳ್ಳಿ ಬಳಿಯ ರಾಷ್ಟ್ರೀಯ 50ರಲ್ಲಿ ಇಂದು ಬೆಳಗಿನ ಜಾವ ಈ ದುರ್ಘಟನೆ ನಡೆದಿದೆ. ವೀರಯ್ಯ (25) ಮತ್ತು ಮಲ್ಲಿಕಾರ್ಜುನ(20) ಮೃತ ದುರ್ದೈವಿಗಳು.

ವೀರಯ್ಯ ಮತ್ತು ಮಲ್ಲಿಕಾರ್ಜುನ ಇಬ್ಬರೂ ಕಾರಿನಲ್ಲಿ ಮಂಗಳವಾರ ತಡರಾತ್ರಿ ಜೇವರ್ಗಿಯಿಂದ ಬೆಂಗಳೂರಿಗೆ ಹೊರಟಿದ್ದರು. ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಕಾರಿನಲ್ಲಿದ್ದವರು ಮೃತಪಟ್ಟಿದ್ದಾರೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net