ಕಾರು-ಲಾರಿ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು

New Project(25)
Published on

ರಾಯಚೂರು: ಸಿಂಧನೂರು ತಾಲೂಕಿನ ಬಾಲಯ್ಯ ಕ್ಯಾಂಪ್ ಬಳಿ ಸೋಮವಾರ ಬೆಳಗ್ಗೆ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ತಂದೆ-ತಾಯಿ ಮತ್ತು ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ. ಮಧ್ಯಪ್ರದೇಶದ ಇಂದೂರ್ ಮೂಲದ ಇವರು ಸಿಂಧನೂರು ಮಾರ್ಗವಾಗಿ ಹೈದ್ರಾಬಾದ್​ಗೆ ಕಾರಿನಲ್ಲಿ ತೆರಳುತ್ತಿದ್ದರು. ಸಿಂಧನೂರು ತಾಲೂಕಿನ ಬಾಲಯ್ಯ ಕ್ಯಾಂಪ್ ಬಳಿ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ನಾಲ್ವರು ದುರಂತ ಅಂತ್ಯ ಕಂಡಿದ್ದಾರೆ.

ಅಪಘಾತದಿಂದ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಅಪಘಾತಕ್ಕೀಡಾದ ವಾಹನಗಳನ್ನು ಎರಡು ಜೆಸಿಬಿಗಳ ಸಹಾಯದಿಂದ ತೆರವು ಮಾಡಿ ಇರತ ವಾಹನಗರ ಸಂಚಾರಕ್ಕೆ ಪೊಲೀಸರು ಅನುವು ಮಾಡಿಕೊಟ್ಟರು. ಮೃತದೇಹಗಳನ್ನು ಸಿಂಧನೂರು ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net