

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರಲ್ಲಿ ಬೆಂಕಿ ಹೊತ್ತಿಕೊಂಡು ಉರಿದಿದ್ದು, ಕಾರಿನಲ್ಲಿದ್ದ ಐವರ ಪೈಕಿ ಮೂರು ಸಜೀವ ದಹನ ಆಗಿದ್ದಾರೆ.
ಇಂತಹ ದುರ್ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ಬಳಿ ಶುಕ್ರವಾರ ಬೆಳಗಿನ ಜಾವ ಸಂಭವಿಸಿದೆ. ಚಾಮರಾಜನಗರ ಜಿಲ್ಲೆಯ ಹನೂರಿನಿಂದ ಬೆಂಗಳೂರಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಇದನ್ನೂ ಓದಿರಿ ಪ್ರಿಯಕರನ ಜತೆಗೂಡಿ ಗಂಡನನ್ನು ಕೊಂದು ಬೆಡ್ ರೂಂನಲ್ಲೇ ಸುಟ್ಟುಹಾಕಿದ ಪತ್ನಿ! ವಾರದ ಬಳಿಕ ಬಯಲಾಗಿದ್ದೇ ರೋಚಕ
ಹಲಗೂರಿನ ಮಹದೇಶ್ವರ ಪೆಟ್ರೋಲ್ ಬಂಕ್ ಸಮೀಪ ಹಳ್ಳಕ್ಕೆ ಕಾರು ಪಲ್ಟಿಯಾಗಿದ್ದು, ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿ ಉರಿದಿದೆ. ಕಾರಿನಲ್ಲಿದ್ದ ಐವರ ಪೈಕಿ ಮೂವರು ಸ್ಥಳದಲ್ಲೇ ಸುಟ್ಟುಕರಕಲಾಗಿದ್ದು, ಇಬ್ಬರಿಗೆ ಸ್ಥಿತಿ ಗಂಭೀರ ವಾಗಿದೆ.
ಶೇಖ್ ಫೈಸಲ್(44), ಮೆಹಕ್(33) ಮತ್ತು ಶೇಖ್ ಆಯಿಲ್(11) ಮೃತ ದುರ್ದೈವಿಗಳು. ಇಬ್ಬರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.