ತೀರ್ಥಹಳ್ಳಿ: ಆಗುಂಬೆ ಸಮೀಪ ಶೃಂಗೇರಿ ಮಾರ್ಗದ ತಲ್ಲೂರಂಗಡಿ ಬಳಿ ಭಾನುವಾರ ಮಧ್ಯಾಹ್ನ ಚಲಿಸುತ್ತಿದ್ದ ಮಾರುತಿ ಸ್ವ್‌ಟಿ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು ಕೆಲವೇ ನಿಮಿಷದಲ್ಲಿ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಕಾರಿನಲ್ಲಿ ಚಾಲಕ ಸೇರಿ ಇಬ್ಬರು ಪ್ರಯಾಣಿಕರಿದ್ದರು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಿಂದ ಇಳಿದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ. ಉಡುಪಿಯಿಂದ ಕುಂದಾದ್ರಿ ಬೆಟ್ಟಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.
ಬೆಟ್ಟಕ್ಕೆ ಹೋಗುತ್ತಿದ್ದ ಕಾರಿಗೆ ಬೆಂಕಿ
ತಲ್ಲೂರು ಅಂಗಡಿ ಬಳಿ ಹೊತ್ತಿ ಉರಿದ ಕಾರು