More

    ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಹೃದ್ರೋಗ ತಜ್ಞ ಡಾ. ಕೆ.ಕೆ. ಅಗರ್ವಾಲ್ ಕೋವಿಡ್​ಗೆ ಬಲಿ

    ನವದೆಹಲಿ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮತ್ತು ಭಾರತೀಯ ವೈದ್ಯಕೀಯ ಸಂಘದ(ಐಎಂಎ) ಮಾಜಿ ಅಧ್ಯಕ್ಷ ಡಾ. ಕೆ.ಕೆ. ಅಗರ್ವಾಲ್ ಅವರು ಕರೊನಾ ಸೋಂಕಿಗೆ ಬಲಿಯಾಗಿದ್ದಾರೆ.

    62 ವರ್ಷದ ಡಾ. ಕೆ.ಕೆ. ಅಗರ್ವಾಲ್ ಅವರಿಗೆ ಕರೊನಾ ಸೋಂಕು ತಗುಲಿತ್ತು. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಾಕಾರಿಯಾಗದೆ ನಿನ್ನೆ(ಸೋಮವಾರ) ರಾತ್ರಿ 11.30ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಮೃತರ ಕುಟುಂಬಸ್ಥರು ಟ್ವೀಟ್​ ಮೂಲಕ ತಿಳಿಸಿದ್ದಾರೆ.

    ಹೃದ್ರೋಗ ತಜ್ಞರಾಗಿದ್ದ ಡಾ.ಕೆ.ಕೆ.ಅಗರ್ವಾಲ್​ ಅವರು ಹಾರ್ಟ್​ ಕೇರ್​ ಫೌಂಡೇಶನ್​ ಆಪ್​ ಇಂಡಿಯಾದ ಮುಖ್ಯಸ್ಥರಾಗಿದ್ದರು. 2005ರಲ್ಲಿ ಡಾ.ಬಿಸಿ ರಾಯ್​ ಪ್ರಶಸ್ತಿ, 2010ರಲ್ಲಿ ಪದ್ಮಶ್ರೀ ಪ್ರಶಸ್ತಿ ಇವರ ಮುಡಿಗೇರಿತ್ತು. ಸಾರ್ವಜನಿಕರ ಹಿತಕ್ಕಾಗಿ ತಮ್ಮ ಜೀವನವನ್ನ ಮುಡಿಪಾಗಿಟ್ಟಿದ್ದ ಡಾ.ಕೆ.ಕೆ. ಅಗರ್ವಾಲ್‍ ಜನರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು. ಕರೊನಾ ಸಂದರ್ಭದಲ್ಲೂ ಜನಸಾಮಾನ್ಯರಿಗೆ ಆರೋಗ್ಯದ ಬಗ್ಗೆ ಮಾರ್ಗದರ್ಶನ ನೀಡುತ್ತಿದ್ದರು.

    ತಾಯಿ ಗರ್ಭದಿಂದ ಮಗುವಿನ ಕಾಲು ಹೊರ ಬಂದಿದೆ.. ಯಾರಾದರೂ ಹೆರಿಗೆ ಮಾಡಿ… ಆಸ್ಪತ್ರೆ ಬಾಗಿಲಲ್ಲಿ ಕುಟುಂಬಸ್ಥರ ಆಕ್ರಂದನ

    ಶಿಕ್ಷಕಿ ಸೇರಿ ಒಂದೇ ಕುಟುಂಬದ ನಾಲ್ವರು ಕರೊನಾಗೆ ಬಲಿ! ಅಪ್ಪ-ಅಮ್ಮ, ಅಜ್ಜಿ-ತಾತನ ಸಾವಿಂದ ಕಂಗೆಟ್ಟ ಬಾಲಕ

    ವಿವಾಹಿತೆ ಜತೆ ಪರಪುರುಷನ ಕಾಮದಾಟ! 5 ವರ್ಷದ ಅಕ್ರಮ ಸಂಬಂಧಕ್ಕೆ ಬಿತ್ತು ಮೂವರ ಹೆಣ

    ಬೆಳ್ಳಂಬೆಳಗ್ಗೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಭಯಾನಕ ಘಟನೆ! ಕಕ್ಕಾಬಿಕ್ಕಿಯಾಗಿ ಓಡಿದ ಕರೊನಾ ಸೋಂಕಿತರು, ಬೆಚ್ಚಿಬೀಳಿಸುತ್ತೆ ಆ ದೃಶ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts