More

    ಒಂದೇ ಗುಂಡಿಗೆ 9 ಶವ ಎಸೆದು ಅಂತ್ಯಸಂಸ್ಕಾರ ಮಾಡಿದ್ದವರಿಗೆ ಎದುರಾಯ್ತು ಸಂಕಷ್ಟ!

    ಬೆಂಗಳೂರು: ರಾಜ್ಯದಲ್ಲಿ ಕರೊನಾಗೆ ಬಲಿಯಾದವರ ಅಂತ್ಯಸಂಸ್ಕಾರವನ್ನು ಅಮಾನವೀಯವಾಗಿ ನೆರವೇರಿಸುತ್ತಿರುವ ಪ್ರಕರಣಗಳು ಇತ್ತೀಚಿಗೆ ಹೆಚ್ಚಾಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಬಗ್ಗೆ ಎಚ್ಚೆತ್ತ ಸರ್ಕಾರ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯನ್ನೂ ವಿಧಿಸುತ್ತಿದೆ.

    ಕೋವಿಡ್​ನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಸ್ಪಷ್ಟ ಕಾನೂನು ಜಾರಿಗೆ ತರುತ್ತೇವೆ. ಯಾರೇ ಆದ್ರು ಮಾನವೀಯತೆ ಮರೆಯಬಾರದು. ವ್ಯಕ್ತಿ ಶವ ಆದ ಕೂಡಲೇ ಅದನ್ನು ಅಮಾನವೀಯವಾಗಿ ನೋಡೋದು ಮನುಷ್ಯತ್ವ ಅಲ್ಲ. ಇಂತಹ ಘಟನೆಯನ್ನು ಸರ್ಕಾರ ಖಂಡಿಸುತ್ತದೆ ಎಂದಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್​, ಬಳ್ಳಾರಿಯಲ್ಲಿ ಇತ್ತೀಚಿಗೆ ಕರೊನಾಗೆ ಬಲಿಯಾದ 9 ಮಂದಿಯ ಶವಗಳನ್ನು ಒಂದೇ ಗುಂಡಿಗೆ ಎಸೆದು ಮಣ್ಣು ಮಾಡಿದ ಘಟನೆಯನ್ನು ಖಂಡಿಸಿದ್ದಾರೆ. ಈ ಸಂಬಂಧ 6 ಸಿಬ್ಬಂದಿಗೆ ತಕ್ಕ ಶಿಕ್ಷೆ ನೀಡಲಾಗಿದೆ ಎಂದೂ ತಿಳಿಸಿದ್ದಾರೆ. ಅಂದಹಾಗೆ ಆ 6 ಮಂದಿಗೆ ಆಗಿರುವ ಶಿಕ್ಷೆ ಏನು ಗೊತ್ತಾ?

    ಇದನ್ನೂ ಓದಿರಿ ಸಗಣಿ-ಗಂಜಲ ಬಳಸಿದ್ರೆ ಕೋವಿಡ್​ ಬರಲ್ಲ!

    ಬಳ್ಳಾರಿಯಲ್ಲಿ 9 ಶವವನ್ನು ಒಂದೇ ಗುಂಡಿಗೆ ಹಾಕಿ ಅಂತ್ಯಸಂಸ್ಕಾರ ಮಾಡಿದ ಪ್ರಕರಣ ಸಂಬಂಧ ಈಗಾಗಲೇ ಜಿಲ್ಲಾಧಿಕಾರಿ ಕ್ಷಮೆ ಕೇಳಿದ್ದಾರೆ. ಈ ಸಂಬಂಧ 6 ಜನರನ್ನ ಅಮಾನತು ಮಾಡಲಾಗಿದೆ ಎಂದು ಡಾ.ಕೆ. ಸುಧಾಕರ್​ ವಿವರಿಸಿದ್ದಾರೆ.

    ಮತ್ತೆ ಇಂತಹ ಘಟನೆಗೆ ಸರ್ಕಾರ ಆಸ್ಪದ ಕೊಡುವುದಿಲ್ಲ. ಕರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರ ಕುರಿತು ಶೀಘ್ರವೇ ವಿಶೇಷ ಕಾನೂನು ಜಾರಿಗೆ ತರುತ್ತೇವೆ ಎಂದು ಸಚಿವರು ತಿಳಿಸಿದ್ದಾರೆ.

    ವಿಧಾನಸೌಧ ಬಳಿ ಅಪಘಾತ, ಎಎಸ್ಐ ಸೇರಿ ನಾಲ್ವರಿಗೆ ಗಾಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts