More

    ಯುವತಿ ಅನುಮಾನಾಸ್ಪದ ಸಾವು ಪ್ರಕರಣ


    ಚಾಮರಾನಗರದ: ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ಯುವತಿ ಮೈಸೂರಿನ ಹೆಬ್ಬಾಳು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಬಗ್ಗೆ ಯುವತಿ ತಾಯಿ ದೂರು ನೀಡಿದ್ದರಿಂದ ಅಂಬಳೆ ಗ್ರಾಮದ ಜಮೀನಿನಲ್ಲಿ ಹೂತಿದ್ದ ಶವವನ್ನು ಪೊಲೀಸರು ಹಾಗೂ ಅಧಿಕಾರಿಗಳು ಹೊರತೆಗೆದು ಗುರುವಾರ ಪಂಚನಾಮೆ ನಡೆಸಿದರು.


    ಅಂಬಳೆ ಗ್ರಾಮದ ಸುಮತಿ ಅವರ ಮಗಳು ಮಮತಾ ಮೈಸೂರಿನ ವೃದ್ಧಾಶ್ರಮವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಫೆ.15 ರಂದು ರಾತ್ರಿ ಶೌಚಗೃಹದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಕೂಡಲೇ ಇವರನ್ನು ಮೈಸೂರಿನ ಜಯದೇವ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟರಲ್ಲಿ ಮೃತಪಟ್ಟಿದ್ದರು.


    ತನ್ನ ಮಗಳ ಸಾವಿನ ಬಗ್ಗೆ ಅನುಮಾನವಿದೆ ಎಂದು ಫೆ.19ರಂದು ತಾಯಿ ಸುಮತಿ ಮೈಸೂರಿನ ಹೆಬ್ಬಾಳು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಶವವನ್ನು ಹೊರತೆಗೆದು ಪಂಚನಾಮೆ ನಡೆಸಲು ಕ್ರಮ ವಹಿಸುವಂತೆ ಉಪವಿಭಾಗಾಧಿಕಾರಿ ಮಹೇಶ್ ಯಳಂದೂರು ತಹಸೀಲ್ದಾರ್‌ಗೆ ಪತ್ರ ಬರೆದಿದ್ದರು.


    ಕಮಲಾ ಎಂಬುವವರ ಕಬ್ಬಿನಗದ್ದೆಯಲ್ಲಿ ಹೂಳಲಾಗಿದ್ದ ಶವವನ್ನು ಹೊರತೆಗೆದು ಪಂಚನಾಮೆ ನಡೆಸಲಾಯಿತು. ಚಾಮರಾಜನಗರ ಸಿಮ್ಸ್ ಆಸ್ಪತ್ರೆಯ ಡಾ.ಮಹೇಶ್ ನೇತೃತ್ವದ ತಂಡ ಮರಣೋತ್ತರ ಪರೀಕ್ಷೆ ನಡೆಸಿದರು. ನಂತರ ಅದೇ ಸ್ಥಳದಲ್ಲಿ ಶವವನ್ನು ಹೂಳಲಾಯಿತು.
    ತಹಸೀಲ್ದಾರ್ ಜಯಪ್ರಕಾಶ್, ಮೈಸೂರು ಹೆಬ್ಬಾಳು ಪೊಲೀಸ್ ಠಾಣೆಯ ಪಿಎಸ್‌ಐ ಭಾಸ್ಕರ್ ಹಾಗೂ ಯಳಂದೂರು ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿ, ಮೃತ ಯುವತಿ ಕುಟುಂಬ ವರ್ಗದವರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts