ತಾಯಿ ಕಣ್ಮುಂದೆ ಕಟ್ಟಡದ ಮೇಲಿನಿಂದ ಬಿದ್ದು ಪ್ರಾಣ ಕಳೆದುಕೊಂಡ ಮಗು

bengluru baby
Published on

ಬೆಂಗಳೂರು: ಆಟ ಆಡುತ್ತಿದ್ದ ಒಂದೂವರೆ ವರ್ಷದ ಮಗುವೊಂದು ಕಟ್ಟಡದ ಮೇಲಿನಿಂದ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಆಜಾದ್ ನಗರದಲ್ಲಿ ನಡೆದಿದೆ.

ಒಂದೂವರೆ ವರ್ಷದ ದೀಕ್ಷಾ ಮೃತ ಮಗು. ರಾತ್ರಿ 9 ಗಂಟೆಗೆ ಮಗುವಿಗೆ ತಾಯಿ ಊಟ ಮಾಡಿಸುತ್ತಿದ್ದಾಗ ಆಟವಾಡುತ್ತ ಗ್ರಿಲ್ ಮೇಲೆ ಹತ್ತಿದೆ. ಕ್ಷಣಾರ್ಧದಲ್ಲಿ ನೋಡು ನೋಡುತ್ತಿದ್ದಂತೆ ಮಗು ಜಾರಿ ಕೆಳಗೆ ಬಿದ್ದಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಮಗು ಕೊನೆಯುಸಿರೆಳೆದಿದೆ.

ಈ ಜೋಡಿ ಸ್ನೇಹಿತರ ಮನೆಗೆ ಬಂದಿದ್ದರು. ರಾತ್ರಿ 9 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮಗು ಕೊನೆಯುಸಿರೆಳೆದಿದೆ. ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net