More

    ತಮಿಳುನಾಡಿನಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ: ಎರಡು ವಾರದಲ್ಲಿ 3ನೇ ಪ್ರಕರಣ

    ಚೆನ್ನೈ: ತಮಿಳುನಾಡಿನಲ್ಲಿ ವಿದ್ಯಾರ್ಥಿನಿಯರ ಆತ್ಮಹತ್ಯೆ ಪ್ರಕರಣಗಳು ಮುಂದುವರಿದಿದ್ದು, ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ.

    ಇಲಿನ ಕುಡಲೂರು ಜಿಲ್ಲೆಯಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದು, ಪತ್ತೆಯಾದ ಸೂಸೈಡ್​ ನೋಟ್​ನಲ್ಲಿ ಆಕೆಯ ಪೋಷಕರು ಐಎಎಸ್​​ ಪ್ರವೇಶ ಪರೀಕ್ಷೆಯಲ್ಲಿ ತೇರ್ಗಡೆಯಾಗಬೇಕೆಂದು ಬಯಸಿದ್ದರು, ಇದು ನನ್ನನ್ನು ಅಪಾರ ಒತ್ತಡಕ್ಕೆ ಸಿಲುಕಿಸಿತ್ತು ಎಂದು ಬರೆದಿದ್ದಾಳೆ ಎನ್ನಲಾಗಿದೆ.

    ತಾಯಿ ಬೈದದ್ದರಿಂದ ಈಕೆ ತೀವ್ರ ನೊಂದಿದ್ದಳು ಎಂದಿರುವ ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

    ಸದ್ಯ ವಿದ್ಯಾರ್ಥಿನಿಯರ ಸಾವು ಪ್ರಕರಣ ಸಂಬಂಧ ಈಗಾಗಲೇ ಕ್ರಮ ಕೈಗೊಳ್ಳಲು ಸೂಚಿಸಿರುವ ಮುಖ್ಯಮಂತ್ರಿ ಎಂಕೆ ಸ್ಟಾಲಿನ್​, ವಿದ್ಯಾರ್ಥಿಗಳು ಆತ್ಮಹತ್ಯೆಯಂತಹ ಆಲೋಚನೆಗಳಿಂದ ದೂರವಿರಬೇಕು ಎಂದು ಹೇಳಿದ್ದಾರೆ.

    ಒಂದು ದಿನದ ಹಿಂದೆಯಷ್ಟೇ ತಿರುವಳ್ಳುರು ತಿರುಟ್ಟಣಿ ಮೂಲದ ಸೇಕ್ರೆಡ್​ ಹಾರ್ಟ್​ ಶಾಲೆಯ 12ನೇ ತರಗತಿ ವಿದ್ಯಾರ್ಥಿನಿ ತನ್ನ ಹಾಸ್ಟೆಲ್​ನಲ್ಲಿ ಶವವಾಗಿ ಪತ್ತೆಯಾಗಿದ್ದಳು. ಸದ್ಯ ಈ ಪ್ರಕರಣವನ್ನು ಸಿಐಡಿಗೆ ಒಪ್ಪಿಸಲಾಗಿದೆ.

    ಇನ್ನ ಕಳೆದ ಜುಲೈ 13ರಂದು ಕಲ್ಲಕುರಿಚಿ ಜಿಲ್ಲೆಯಲ್ಲಿ 12ನೇ ತರಗತಿಯ ವಿದ್ಯಾರ್ಥಿನಿಯ ಸಾವಿನ ಬಗ್ಗೆಯೂ ಸಿಐಡಿ ತನಿಖೆ ನಡೆಸುತ್ತಿದೆ. ಸದ್ಯ ಈ ಪ್ರಕರಣ ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು. (ಏಜೆನ್ಸೀಸ್​)

    ಸಿನಿಮಾಗಳು ನಷ್ಟವಾಗುವುದು ನನಗೆ ಇಷ್ಟವಿಲ್ಲ, ದಕ್ಷಿಣದ ಸಿನಿಮಾಗಳೇ ಬೆಸ್ಟ್​ ಎಂದ ಸಲ್ಲು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts