More

    ಲಾಕ್​ಡೌನ್ ಜಾರಿ ಮಾಡುವ ಪ್ರಶ್ನೆಯೇ ಇಲ್ಲ, 2 ಹಂತದಲ್ಲಿ ಪರಿಸ್ಥಿತಿ ನಿಭಾಯಿಸುತ್ತಿದ್ದೇವೆ: ಸಿಎಂ ಬೊಮ್ಮಾಯಿ

    ಬೆಂಗಳೂರು: ಹೊಸ ವೈರಸ್​​ ಒಮಿಕ್ರಾನ್ ಬಗ್ಗೆ ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯಮಟ್ಟದಲ್ಲಿ ಏನಾಗುತ್ತಿದೆ ಎಂದು ಗಮನಸುತ್ತಿದ್ದೇವೆ. ರಾಜ್ಯ ಸರ್ಕಾರದಿಂದ ಹೇಗೆಲ್ಲ ನಿಬಾಯಿಸಬೇಕು ಎಂದು ಚರ್ಚೆ ಮಾಡುತ್ತಿದ್ದೇವೆ. ವಿದೇಶದಿಂದ ಬಂದ ಪ್ರಯಾಣಿಕರ ಮೇಲೆ ತೀವ್ರ ನಿಗಾವಹಿಸಲಾಗಿದೆ. ಸೋಂಕು ಪ್ರಕರಣಗಳ ಸಮೂಹ(ಕ್ಲಸ್ಟರ್) ಕಂಡು ಬಂದಲ್ಲಿ ತಪಾಸಣೆ ಹಾಗೂ ಹೆಚ್ಚಿನ ವ್ಯಾಕ್ಸಿನೇಷನ್ ಡ್ರೈವ್​ಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

    ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಇನ್ನು ರಾಜ್ಯದಲ್ಲಿ ಲಾಕ್​ಡೌನ್ ಜಾರಿಗೆ ತರುವ ಪ್ರಶ್ನೆಯೇ ಇಲ್ಲ ಎಂದು ಸ್ಟಷ್ಪಡಿಸಿದ ಸಿಎಂ, ಊಹಾಪೋಹಕ್ಕೆ ಆಸ್ಪದಕೊಡಬೇಡಿ. ಜನ-ಜೀವನ ಸಹಜಸ್ಥಿತಿಯಲ್ಲಿ ಸಾಗಬೇಕು. ಸಂಘ-ಸಂಸ್ಥೆಗಳು ಜನರನ್ನು ಸೇರಿಸುವಾಗ ಎಚ್ಚರ ವಹಿಸಬೇಕು. ಪ್ರತಿಯೊಬ್ಬರೂ ಕರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮನವಿ ಮಾಡಿದರು.

    ಈಗಿರುವ ಡೆಲ್ಟಾ ಸ್ಟ್ರೈನ್​ನಲ್ಲಿ ಕ್ಲಸ್ಟರ್ ಆಗ್ತಿದೆ. ಎರಡು ಹಂತಗಳಲ್ಲಿ ಪರಿಸ್ಥಿತಿ ನಿಭಾಯಿಸುತ್ತಿದ್ದೇವೆ. ಶಂಕಿತ ಪ್ರಕರಣದ ವರದಿಯನ್ನು ಹೆಚ್ಚಿನ ತನಿಖೆಗೆ ಐಸಿಎಂಆರ್​ಗೆ ಕಳಿಸಿದ್ದೇವೆ. ನಮ್ಮ ಹಂತದಲ್ಲಿ ಸಾಧ್ಯವಾದ ಎಲ್ಲ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಸಿಎಂ ವಿವರಿಸಿದರು.

    ಸೋಂಕು ಪ್ರಕರಣಗಳು ಕಂಡು ಬಂದಿರುವ ಧಾರವಾಡ, ಮೈಸೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಎಲ್ಲರನ್ನೂ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಧಾರವಾಡ ಎಸ್​ಡಿಎಂ ಕಾಲೇಜಿನಲ್ಲಿ 4,000 ಜನರ ತಪಾಸಣೆಯಾಗಿದೆ. ಅವರ ಸಂಪರ್ಕಿತರನ್ನು ಪತ್ತೆ ಹಚ್ಚಿ ಟೆಸ್ಟ್ ಮಾಡಲಾಗುವುದು. ಏಳು ದಿನಗಳ ನಂತರ ಎಲ್ಲರಿಗೂ ಮತ್ತೊಂದು ಸುತ್ತಿನ ತಪಾಸಣೆ ನಡೆಯಲಿದೆ ಎಂದರು.

    ಬೆಳಗಾವಿಯಲ್ಲಿ ನಡೆಯಲಿರುವ ವಿಧಾನ ಮಂಡಲ ಅಧಿವೇಶನಕ್ಕೂ ಎಲ್ಲ ರೀತಿಯ ಮುನ್ನೆಚ್ಚರಿಕೆ ನಿಯಮಗಳು ಅನ್ವಯವಾಗುತ್ತವೆ ಎಂದು ಸಿಎಂ ಬೊಮ್ಮಾಯಿ‌ ಸ್ಪಷ್ಟ ಪಡಿಸಿದರು.

    ನಟ ಪುನೀತ್​ಗಾಗಿ 500 ಕಿ.ಮೀ. ದೂರದಿಂದ ಓಟದ ಮೂಲಕವೇ ಬೆಂಗಳೂರಿಗೆ ಆಗಮಿಸುತ್ತಿದ್ದಾಳೆ 3 ಮಕ್ಕಳ ತಾಯಿ!

    ವಿವಾದದ ಸುಳಿಯಲ್ಲಿ ‘ಗರುಡ ಗಮನ ವೃಷಭ ವಾಹನ’ ಸಿನಿಮಾ: ಮಾದಪ್ಪ ಭಕ್ತರಿಂದ ಆಕ್ರೋಶ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts