ಡಾ. ವಿಜಯ ಸಂಕೇಶ್ವರ ಅವರಿಗೆ ಹುಟ್ಟುಹಬ್ಬದ ಸಂಭ್ರಮ: ಸಿಎಂ ಸೇರಿದಂತೆ ಹಲವು ಗಣ್ಯರಿಂದ ಶುಭ ಹಾರೈಕೆ

dr vijaya sankeshwara
Published on

ಬೆಂಗಳೂರು: ವಿಆರ್​ಎಲ್​ ಸಮೂಹ ಸಂಸ್ಥೆಯ ಚೇರ್ಮನ್​, ಪದ್ಮಶ್ರೀ ಡಾ. ವಿಜಯ ಸಂಕೇಶ್ವರ ಅವರಿಗೆ ಇಂದು(ಆಗಸ್ಟ್​ 2) ಹುಟ್ಟುಹಬ್ಬದ ಸಂಭ್ರಮ. ನಾಡಿನಾದ್ಯಂತ ಅವರ ಹುಟ್ಟುಹಬ್ಬಕ್ಕೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಗಣ್ಯರು, ಸ್ವಾಮೀಜಿಗಳು, ಸಾರ್ವಜನಿಕರು, ವಿಆರ್​ಎಲ್​ ಸಂಸ್ಥೆಯ ಉದ್ಯೋಗಿಗಳು-ಅವರ ಕುಟುಂಬಸ್ಥರು, ಸ್ನೇಹಿತರು ಜನ್ಮದಿನಕ್ಕೆ ಶುಭಕೋರಿದ್ದಾರೆ.

'ರಾಜ್ಯದ ಯಶಸ್ವಿ ಉದ್ಯಮಿಗಳು ವಿಆರ್​ಎಲ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಮಾಜಿ ಸಂಸದರಾದ ಆತ್ಮೀಯ ಶ್ರೀ ವಿಜಯ ಸಂಕೇಶ್ವರ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ಅವರಿಗೆ ಉತ್ತಮ ಆರೋಗ್ಯ ಹಾಗೂ ದೀರ್ಘಾಯುಷ್ಯ ನೀಡಿ ಆಶೀರ್ವದಿಸಲಿ' ಎಂದು ಟ್ವೀಟ್​ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಭಕೋರಿದ್ದಾರೆ.

'ಯಶಸ್ವಿ ಉದ್ಯಮಿಗಳು, ನನ್ನ ಆತ್ಮೀಯರಾದ ಶ್ರೀ ವಿಜಯ ಸಂಕೇಶ್ವರ ಅವರಿಗೆ ಜನ್ಮದಿನದ ಹಾರ್ದಿಕ ಶುಭಕಾಮನೆಗಳು. ದೇವರ ಅನುಗ್ರಹ ನಿಮ್ಮ ಮೇಲೆ ಸದಾ ಇರಲಿ' ಎಂದು ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಟ್ವೀಟ್​ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net