ಬೆಂಗಳೂರು: ಚೊಚ್ಚಲ ಬಜೆಟ್ನಲ್ಲೇ ಸಿಎಂ ಬಸವರಾಜ ಬೊಮ್ಮಾಯಿ ಅವರು ತವರು ಜಿಲ್ಲೆ ಹಾವೇರಿಗೆ ಬಹುತೇಕ ಎಲ್ಲ ಇಲಾಖೆಗೂ ವಿಶೇಷ ಆದ್ಯತೆ ಕೊಟ್ಟಿದ್ದಾರೆ. ಆ ಮೂಲಕ ಸಿಎಂ ಜಿಲ್ಲೆಯ ಋಣ ತೀರಿಸಲು ಯತ್ನಿಸಿದ್ದಾರೆ.
ಹಾವೇರಿಯಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 20 ಕೋಟಿ ರೂ. ಅನುದಾನ
ಹಾವೇರಿ ಆಸ್ಪತ್ರೆ ಮೇಲ್ದರ್ಜೆಗೆ
ಹಾವೇರಿ ಜಿಲ್ಲೆಯಲ್ಲಿ ಹೈಟೆಕ್ ಸರ್ಕಾರಿ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ
ಚೆನ್ನೈ-ಬೆಂಗಳೂರು-ಮುಂಬೈ ಕಾರಿಡಾರ್ ವ್ಯಾಪ್ತಿಯಲ್ಲಿ ಬರುವ ಹಾವೇರಿಯಲ್ಲಿ ಕೈಗಾರಿಕೆ ಸ್ಥಾಪಿಸಲು ಉತ್ತೇಜನ
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನಲ್ಲಿ ನೂತನ ಜವಳಿ ಪಾರ್ಕ್ ನಿರ್ಮಾಣ, ಸಾವಿರಾರು ಉದ್ಯೋಗ ಸೃಷ್ಟಿ
ಹಾವೇರಿ ಜಿಲ್ಲೆಯಲ್ಲಿ ಒಂದು ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೇರಿ ಸ್ಥಾಪನೆ
'ಮುಖ್ಯಮಂತ್ರಿ ಆರೋಗ್ಯ ವಾಹಿನಿ' ಎಂಬ ಹೊಸ ಯೋಜನೆಯಡಿ ಹಾವೇರಿ ಜಿಲ್ಲೆಯಲ್ಲಿ ಸಂಚಾರಿ ಕ್ಲಿನಿಕ್ ಸ್ಥಾಪನೆ
ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶಗಳಲ್ಲಿ ಹಾವೇರಿಯಲ್ಲಿ ವಿನೂತನ ಮಾದರಿ ವಿಶ್ವವಿದ್ಯಾಲಯ ಸ್ಥಾಪನೆ. ಇದು ಸಾಂಪ್ರದಾಯಿಕ ವಿಶ್ವವಿದ್ಯಾಲಯಗಳಿಗಿಂತ ಭಿನ್ನವಾಗಿ ತಂತ್ರಜ್ಞಾನದ ಬಳಕೆಯೊಂದಿಗೆ ಕಾರ್ಯನಿರ್ವಹಿಸಲಿದೆ