More

    ನೀರು ಸೋರಿಕೆ ಪ್ರಮಾಣ ತಗ್ಗಿಸಲು ಜಲಮಂಡಳಿಗೆ ಸಿಎಂ ಸೂಚನೆ

    ಬೆಂಗಳೂರು: ಬೆಂಗಳೂರು ಜಲಮಂಡಳಿ ವ್ಯಾಪ್ತಿಯಲ್ಲಿ ಶೇ.36ರಷ್ಟಿರುವ ನೀರು ಸೋರಿಕೆಯನ್ನು ಶೇ.20ಕ್ಕಿಳಿಸುವ ಬಗ್ಗೆ ಕಾರ್ಯತಂತ್ರ ರೂಪಿಸಿ ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರ್ದೇಶನ ನೀಡಿದರು.

    ಸೋಮವಾರ ಹಮ್ಮಿಕೊಂಡಿದ್ದ ಬೆಂಗಳೂರು ಜಲ ಮಂಡಳಿಯ ಕಾರ್ಯ ಚಟುವಟಿಕೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ, ನೀರು ಸೋರಿಕೆ ತಡೆಗಟ್ಟುವ ಕುರಿತು ಇತರ ನಗರಗಳ ಮಾಹಿತಿಯನ್ನೂ ಅಧ್ಯಯನ ನಡೆಸಿ ವರದಿ ಸಲ್ಲಿಸಿ ಎಂದರು. ಮಳೆಗಾಲದಲ್ಲಿ ತುರ್ತು ಸಂದರ್ಭ ನಿರ್ವಹಣೆಗಾಗಿ ಬೆಂಗಳೂರು ಜಲ ಮಂಡಳಿ ಕೈಗೊಂಡಿರುವ ಮುನ್ನೆಚ್ಚರಿಕೆಯ ಕ್ರಮಗಳ ಕುರಿತು ಸಿಎಂ ಮಾಹಿತಿ ಪಡೆದರು.

    ಬೆಂಗಳೂರು ನಗರಕ್ಕೆ ಸೇರ್ಪಡೆಯಾದ 110 ಹಳ್ಳಿಗಳಲ್ಲಿ ಕುಡಿಯುವ ನೀರಿನ ಕೊಳವೆ ಅಳವಡಿಸುವ ಕಾಮಗಾರಿ ಪೂರ್ಣಗೊಂಡಿದ್ದು, 51 ಗ್ರಾಮಗಳಿಗೆ ನೀರು ಪೂರೈಕೆ ಮಾಡಲಾಗುತ್ತಿದೆ. 2022ರ ಡಿಸೆಂಬರ್ ವೇಳೆಗೆ ಉಳಿದ 59 ಗ್ರಾಮಗಳಿಗೆ ನೀರು ಪೂರೈಕೆ ಮಾಡಲಾಗುವುದು. ಈ ಗ್ರಾಮಗಳಲ್ಲಿ ಒಳಚರಂಡಿ ಕಾಮಗಾರಿಯು ಮುಕ್ತಾಯದ ಹಂತದಲ್ಲಿದೆ ಎಂದು ಸಿಎಂಗೆ ಅಧಿಕಾರಿಗಳು ಮಾಹಿತಿ ನೀಡಿದರು.

    ನಗರಕ್ಕೆ 775 ಎಂ.ಎಲ್. ಹೆಚ್ಚುವರಿ ನೀರು ಒದಗಿಸುವ 5550 ಕೋಟಿ ರೂ. ವೆಚ್ಚದ ಕಾವೇರಿ 5ನೇ ಹಂತ ಯೋಜನೆಯನ್ನು 2023ರಲ್ಲಿ ಪೂರ್ಣಗೊಳಿಸುವ ಗುರಿಯಿದೆ. ಈವರೆಗೆ ಕಾಮಗಾರಿಗಳು ನಿಗದಿತ ಗುರಿಗಿಂತ ವೇಗವಾಗಿ ಪ್ರಗತಿ ಸಾಧಿಸಿವೆ ಎಂದು ವಿವರಣೆ ನೀಡಿದರು.

    ಸಭೆಯಲ್ಲಿ ಸಿಎಂ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಬೆಂಗಳೂರು ಜಲಮಂಡಳಿ ಅಧ್ಯಕ್ಷ ಎನ್. ಜಯರಾಂ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

    ಮಹಾವಂಚಕಿಗೆ ಸಾಥ್ ಕೊಟ್ಟ ಸ್ಯಾಂಡಲ್​ವುಡ್​ ನಟ? ಸಾವಿರಾರು ಕೋಟಿ ರೂ. ರಹಸ್ಯ ಬಯಲು

    ಕ್ಲೋಸ್ ಡೋರ್​ ಮೀಟಿಂಗ್​ನಲ್ಲಿ ರೋಹಿಣಿ ಸಿಂಧೂರಿಗೆ ಹಿಗ್ಗಾಮುಗ್ಗಾ ತರಾಟೆ! ಮೌನವಾಗಿಯೇ ಹೊರಟ ಡಿಸಿ

    ಹಿಂದು ಯುವತಿಯನ್ನ ಮದ್ವೆಯಾದ 7 ಮಕ್ಕಳ ತಂದೆ! ಖಾಸಗಿ ದೃಶ್ಯ ಸೆರೆಹಿಡಿದು ಇಸ್ಲಾಂಗೆ ಮತಾಂತರ

    ನಮ್ಮನ್ನು ಬದುಕಲು ಬಿಡಿ ಎಂದು ಕಣ್ಣೀರಿಟ್ಟರೂ ಪ್ರಿಯಕರನಿಗೆ ಚಪ್ಪಲಿ ಹಾರ ಹಾಕಿ ತಲೆ ಬೋಳಿಸಿದ ಯುವತಿ ಕುಟುಂಬಸ್ಥರು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts