ತೆಂಗಿನ ಮರ ಬಿದ್ದು ಒರ್ವ ಸಾವು

blank

ಲಿಂಗದಹಳ್ಳಿ: ಲಿಂಗದಹಳ್ಳಿ ಸಮೀಪ ಸೋಮವಾರ ಸಂಜೆ ಬೀಸಿದ ಬಿರುಗಾಳಿಯಿಂದ ಓಮ್ನಿ ಕಾರ್ ಮೇಲೆ ತೆಂಗಿನಮರ ಮತ್ತು ವಿದ್ಯುತ್ ಕಂಬಗಳು ಬಿದ್ದು ಕಾರಿನಲ್ಲಿದ್ದ ದೇವರಾಜಾಚಾರ್ (38) ಎಂಬುವವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಕಡೂರು ಸಮೀಪದ ಮತಿಘಟ್ಟ ಗ್ರಾಮದ ಐವರು ಕಲ್ಲತ್ತಿಗಿರಿಗೆ ಪೂಜೆ ಮಾಡಿಸಲು ಬರುತ್ತಿದ್ದಾಗ ಲಿಂಗದಹಳ್ಳಿ ಸಮೀಪ ಕಾರ್ ಮೇಲೆ ತೆಂಗಿನಮರ ಮತ್ತು ವಿದ್ಯುತ್ ಕಂಬಗಳು ಬಿದ್ದಿವೆ. ಇದರಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಎರೇಹಳ್ಳಿ ಗ್ರಾಮದ ಹನುಮಪ್ಪ (58) ಎಂಬವವರಿಗೆ ತೀವ್ರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಿಂಗದಹಳ್ಳಿ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Share This Article

Raw Milkನಿಂದ ಹೊಳೆಯುವ ತ್ವಚೆ! ಹಸಿ ಹಾಲಿನಲ್ಲಿ ಇವುಗಳನ್ನು ಬೆರೆಸಿ ಹಚ್ಚಿಕೊಳ್ಳಿ ಸಾಕು..

Raw Milk Beauty Tips: ಹಾಲು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ನಮಗೆಲ್ಲರಿಗೂ ತಿಳಿದಿದೆ. ಹಾಲು…

Health Tips | ಕರಿಬೇವು ತಿನ್ನುವುದರಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ: ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ..

ಅಡುಗೆಯಲ್ಲಿ ರುಚಿ ಮತ್ತು ಸುವಾಸನೆಯನ್ನು ಹೆಚ್ಚಿಸುವ ಸಲುವಾಗಿ ಕರಿಬೇವನ್ನು ಉಪಯೋಗಿಸುತ್ತಾರೆ. ಇದರಿಂದ ಆರೋಗ್ಯಕ್ಕೂ ಎಷ್ಟೆಲ್ಲಾ ಪ್ರಯೋಜನ…