

ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರಲ್ಲಿ ಹೆಜ್ಜೇನು ದಾಳಿಗೆ ಒಳಗಾಗಿ ಕಾಫಿ ಮಂಡಳಿ ಮಾಜಿ ಅಧ್ಯಕ್ಷ ಎಂ.ಎಸ್. ಬೋಜೇಗೌಡ(73) ಶನಿವಾರ ಮೃತಪಟ್ಟರು.
ಅರಶಿನಗುಪ್ಪೆ ಸಮೀಪದ ಕೃಷ್ಣಗಿರಿ ಕಾಫಿ ತೋಟದಲ್ಲಿ ಈ ದುರ್ಘಟನೆ ಸಂಭವಿಸಿದೆ. ಒಮ್ಮೆಲೆ ನೂರಾರು ಜೇನು ನೊಣಗಳು ದಾಳಿ ಮಾಡಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಬೋಜೇಗೌಡರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಮಾರ್ಗಮಧ್ಯೆಯೇ ಕೊನೆಯುಸಿರೆಳೆದರು.
ಎರಡು ಬಾರಿ ಬೋಜೇಗೌಡರು ಕಾಫಿ ಮಂಡಳಿ ಅಧ್ಯಕ್ಷರಾಗಿದ್ದರು. ಎರಡು ಭಾರಿ ಬಿಜೆಪಿ ಜಿಲ್ಲಾ ಅಧ್ಯಕ್ಷರು ಕೂಡ ಆಗಿದ್ದರು. ಒಂದು ಬಾರಿ ಜನತಾ ಪಕ್ಷದ ಜಿಲ್ಲಾಧ್ಯಕ್ಷರಾಗಿದ್ದರು. ಒಮ್ಮೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.