ಚುಡಾಯಿಸಿದವನಿಗೆ ಚಪ್ಪಲಿಯಲ್ಲಿ ಹೊಡೆದ ಕಾಲೇಜು ವಿದ್ಯಾರ್ಥಿನಿ; ಪೊಲೀಸರ ವಶಕ್ಕೆ ಆರೋಪಿ..

Crime
Published on

ಉಡುಪಿ: ಚುಡಾಯಿಸುತ್ತ ವಿಕೃತವಾಗಿ ವರ್ತಿಸಿದ ವ್ಯಕ್ತಿಗೆ ಕಾಲೇಜು ವಿದ್ಯಾರ್ಥಿನಿ ಚಪ್ಪಲಿಯಲ್ಲಿ ಬಾರಿಸಿದ್ದಾಳೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಇಂಥದ್ದೊಂದು ಪ್ರಕರಣ ನಡೆದಿದ್ದು, ಆರೋಪಿಯನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ.

ಬಾರ್ಕೂರು ಮೂಲದ ನಜೀರ್ (35) ಎಂಬಾತ ಆರೋಪಿ. ಕುಂದಾಪುರದ ವಕ್ವಾಡಿ ರಸ್ತೆಯಲ್ಲಿ ಈ ಪ್ರಕರಣ ನಡೆದಿದೆ. ಕಾಲೇಜು ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್​ನಿಂದ ಕಾಲೇಜಿಗೆ ತೆರಳುತ್ತಿದ್ದಾಗ ಈತ ವಿಕೃತವಾಗಿ ವರ್ತಿಸಿ, ಕಿರುಕುಳ ನೀಡಿದ್ದಾನೆ.

ಹಿಂದಿನಿಂದ ಬಂದು ಕಿರುಕುಳ ನೀಡಿದ ಈತನಿಗೆ ಚಪ್ಪಲಿಯಿಂದ ಹೊಡೆದ ವಿದ್ಯಾರ್ಥಿನಿ, ಬಳಿಕ ಸಹಾಯಕ್ಕಾಗಿ ಕೂಗಿಕೊಂಡಿದ್ದಾಳೆ. ಆಗ ಸ್ಥಳೀಯರು ಜಮಾಯಿಸಿದ್ದು, ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net