

ಕೋಲಾರ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತಗಳಿಸಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಶನಿವಾರ ವಿಜಯೋತ್ಸವ ಆಚರಿಸಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಜಮಾಯಿಸಿದ ಕಾರ್ಯಕರ್ತರು ಲಿತಾಂಶ ಹೊರಬೀಳುತ್ತಿದ್ದಂತೆ ಪಟಾಕಿ ಸಿಡಿಸಿ, ಸಿಹಿ ಹಂಚು ಮೂಲಕ ನರೇಂದ್ರ ಮೋದಿ ಅವರಿಗೆ ಜೈಕಾರ ಕೂಗಿ ಸಂಭ್ರಮಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಓಂಶಕ್ತಿ ಚಲಪತಿ ಮಾತನಾಡಿ, ಸತತ 27 ವರ್ಷಗಳ ನಂತರ ದೆಹಲಿಯಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿದಿದೆ. ದೆಹಲಿ ಜನ ಮೋದಿ ಅವರ ಆಡಳಿತಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಪಕ್ಷಕ್ಕೆ ಅಧಿಕಾರ ನೀಡಿದ್ದಾರೆ.
ದೆಹಲಿಯಲ್ಲಿ ಬಿಜೆಪಿಯು ಅಧಿಕಾರದ ಚುಕ್ಕಾಣಿ ಹಿಡಿಯಲು ಪ್ರತಿಯೊಬ್ಬರ ಕಾರ್ಯಕರ್ತನ ಶ್ರಮವೆ ಕಾರಣ. ಕಳೆದ 10 ವರ್ಷಗಳಿಂದ ಎಎಪಿ ಅಧಿಕಾರದಲ್ಲಿ ಇತ್ತು, ಅವರ ಕಾರ್ಯವೈಖರಿ ಬಗ್ಗೆ ಜನ ಗಮನಿಸಿದ್ದಾರೆ. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಅಭಿವೃದ್ಧಿಯಾಗಿದೆ ಎಂಬುದು ಗಮನದಲ್ಲಿಟ್ಟುಕೊಂಡು ಮತ ನೀಡಿದ್ದಾರೆ ಎಂದು ಅಭಿಪ್ರಾಯಪಟ್ಟರು.
ನಾಯಕರ ನಡುವಿನ ಸಣ್ಣಪುಟ್ಟ ಸಮಸ್ಯೆಗಳನ್ನು ಬೆಗೆಹರಿಸಿದರೆ ಚುನಾವಣೆಯಲ್ಲಿ ಪಕ್ಷ$ವನ್ನು ಅಧಿಕಾರಕ್ಕೆ ತರಬಹುದು ಎಂಬುದಕ್ಕೆ ದೆಹಲಿ ಚುನಾವಣೆ ಸಾಯಾಗಿದೆ. ದೇಶದ ಕೇಂದ್ರ ಬಿಂದುವಾಗಿರುವ ದೆಹಲಿ ಚುನಾವಣೆಯು ಮುಂದಿನ ಚುನಾವಣೆಗಳಿಗೆ ದಿಕ್ಸೂಚಿಯಾಗಿದೆ ಎಂದರು.
ಇತ್ತೀಚೆಗೆ ಪಕ್ಷದ ವರಿಷ್ಠರು ಜಿಲ್ಲೆಯ ಜವಾಬ್ದಾರಿ ನೀಡಿದ್ದಾರೆ. ಕಾರ್ಯಕರ್ತರ ಭರವಸೆಯಂತೆ ಕೆಲಸ ಮಾಡುತ್ತೇನೆ, ಜವಾಬ್ದಾರಿ ಇದ್ದರೂ ಕಾರ್ಯಕರ್ತನಾಗಿ ಪಕ್ಷದ ಕೆಲಸ ಮಾಡುತ್ತೇನೆ. ಸಕ್ರಿಯವಾಗಿದ್ದವರಿಗೆ ಅವಕಾಶ ಕಲ್ಪಿಸಿಕೊಡುತ್ತಾರೆ, ಅದೇನು ಶಾಶ್ವತವಲ್ಲ, ಇಲ್ಲಿ ಸಾಮಾನ್ಯ ಕಾರ್ಯಕರ್ತನೆ ಶಾಶ್ವತ ಎಂದು ಹೇಳಿದರು.
ವಕ್ತಾರ ಎಸ್.ಬಿ.ಮುನಿವೆಂಕಟಪ್ಪ ಮಾತನಾಡಿ, ದೆಹಲಿಯಲ್ಲಿ ಈ ಹಿಂದೆ ಕಾಂಗ್ರೆಸ್, ಎಎಪಿ ಅವರು ಅಧಿಕಾರ ನಡೆಸಿದರು. ಆ ಸಂದರ್ಭದಲ್ಲಿ ಜನತೆಗೆ ರಕ್ಷಣೆ ಇರಲಿಲ್ಲ ಎಂಬುದು ಗೊತ್ತಾಗಿದೆ. ದೇಶದ ಯಾವ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇದಿಯೋ ಅಲ್ಲಿನ ಜನತೆ ನೆಮ್ಮದಿಯಿಂದ ಜೀವನ ಸಾಗಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ದೆಹಲಿಯಲ್ಲಿ ಆದ ಬೆಳವಣಿಗೆಗಳಿಂದ ಬಿಜೆಪಿ ಅಧಿಕಾರಕ್ಕೆ ಬರಲು ಕಾರಣ ಎಂದು ತಿಳಿಸಿದರು.
ದೆಹಲಿಯಲ್ಲಿ ಬಿಜೆಪಿಗೆ ಬಹುಮತ ದೊರೆತಿದೆ ಎಂದರೆ ಅದು ಮುಂದಿನ ಚುನಾವಣೆಗಳಿಗೆ ದಿಕ್ಸೂಚಿ ಇದ್ದಂತೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೂ ಸಹ, ದೆಹಲಿ ರಾಜ್ಯದಲ್ಲಿ ಎಎಪಿ ಅಧಿಕಾರದಲ್ಲಿ ಇತ್ತು. ಕಳೆದ ಲೋಕಸಭೆ ಚುನಾವಣೆಯಿಂದ ಕಾಂಗ್ರೆಸ್ನ ಇಂಡಿಯಾ ಕೂಟದಲ್ಲಿ ಗುರುತಿಸಿಕೊಂಡ ಕಾರಣ ಅಧಿಕಾರ ಕಳೆದುಕೊಳ್ಳಬೇಕಾಯಿತು ಎಂದು ಎಂದರು.
ಬೇತಮಂಗಲದಲ್ಲಿ ಬಿಜೆಪಿ ವಿಜಯೋತ್ಸವ
ಬೇತಮಂಗಲ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿರುವ ಹಿನ್ನೆಲೆಯಲ್ಲಿ ಕೆಜಿಎಫ್ ತಾಲೂಕು ಬೇತಮಂಗಲದಲ್ಲಿ ಬಿಜೆಪಿ ಕಾರ್ಯಕರ್ತರು ಶನಿವಾರ ವಿಜಯೋತ್ಸವ ಆಚರಿಸಿದರು.
ಬಸ್ ನಿಲ್ದಾಣದ ಅಂಬೇಡ್ಕರ್ ಪ್ರತಿಮೆಗೆ ಕಾರ್ಯಕರ್ತರು ಮಾಲಾರ್ಪಣೆ ಮಾಡಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಬಿಜೆಪಿ ಮತ್ತು ನರೇಂದ್ರ ಮೋದಿ ಪರ ಘೋಷಣೆ ಕೂಗಿದರು.
ಗ್ರಾಪಂ ಮಾಜಿ ಅಧ್ಯಕ್ಷೆ ಮಮತಾ ಗಣೇಶ್ ಮತ್ತು ರಾಧಮ್ಮ ಮಾತನಾಡಿ, ಪ್ರಧಾನಮಂತ್ರಿ ಅವರ ಆಡಳಿತ, ಜನಪರ, ಅಭಿವೃದ್ಧಿ ಕಾರ್ಯ ಮೆಚ್ಚಿ ದೆಹಲಿ ಮತದಾರರು ಬಿಜೆಪಿಗೆ ಸ್ಪಷ್ಟ ಬಹುಮತ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಕರ್ನಾಟಕ ಮತ್ತು ತೆಲಂಗಾಣದಲ್ಲೂ ಕಾಂಗ್ರೆಸ್ಮುಕ್ತ ದೇಶವಾಗಲಿದೆ ಎಂದರು.