More

    ಪ್ಲಾಸ್ಟಿಕ್‌ಮುಕ್ತ ನಗರ ನಿರ್ಮಾಣಕ್ಕೆ ಸಂಕಲ್ಪ

    ಚಿಕ್ಕಮಗಳೂರು: ಪ್ಲಾಸ್ಟಿಕ್‌ಮುಕ್ತ ನಗರ ನಿರ್ಮಾಣ ಮಾಡಲು ಪ್ರತಿಯೊಬ್ಬರೂ ಸಂಕಲ್ಪ ಮಾಡಬೇಕು ಎಂದು ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ತಿಳಿಸಿದರು.

    ಚಿಕ್ಕಮಗಳೂರು: ಪ್ಲಾಸ್ಟಿಕ್‌ಮುಕ್ತ ನಗರ ನಿರ್ಮಾಣ ಮಾಡಲು ಪ್ರತಿಯೊಬ್ಬರೂ ಸಂಕಲ್ಪ ಮಾಡಬೇಕು ಎಂದು ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ತಿಳಿಸಿದರು.
    ನಗರದ ಬಸ್ ನಿಲ್ದಾಣದಲ್ಲಿ ನಗರಸಭೆಯಿಂದ ಬುಧವಾರ ಏರ್ಪಡಿಸಿದ್ದ ಪ್ಲಾಸ್ಟಿಕ್‌ಮುಕ್ತ ಚಿಕ್ಕಮಗಳೂರು ಅಭಿಯಾನದ ಅಂಗವಾಗಿ ಹಮ್ಮಿಕೊಂಡಿದ್ದ ಬೀದಿನಾಟಕಕ್ಕೆ ಚಾಲನೆ ನೀಡಿ ಮಾತನಾಡಿ, ನಗರದ ಸಮೀಪದಲ್ಲಿ ಪ್ರಮುಖ ಪ್ರವಾಸಿ ತಾಣಗಳು ಇವೆ. ಅಲ್ಲಿಗೆ ಬರುವ ಪ್ರವಾಸಿಗರು ಪ್ಲಾಸ್ಟಿಕ್ ಹೆಚ್ಚಾಗಿ ಬಳಕೆ ಮಾಡುವುದರಿಂದ ಪರಿಸರದ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಲಾಗುವುದು ಎಂದರು.
    ನಗರದ ಸಂತೆಮೈದಾನ, ಶಾಲಾ ಕಾಲೇಜು, ಬಸ್ ನಿಲ್ದಾಣ ಸೇರಿದಂತೆ ಜನಸಂದಣಿ ಇರುವ ಕಡೆಗಳಲ್ಲಿ ಪ್ಲಾಸ್ಟಿಕ್‌ನಿಂದಾಗುವ ಸಮಸ್ಯೆ ಕುರಿತು ಬೀದಿನಾಟಕ ಮೂಲಕ ಅರಿವು ಜನರಿಗೆ, ವ್ಯಾಪಾರಸ್ಥರಿಗೆ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.
    ನಿಷೇಧಿತ ಪ್ಲಾಸ್ಟಿಕ್ ಬಳಸಿದರೆ ದಂಡ ಕಟ್ಟಬೇಕಾಗುತ್ತದೆ. ಸಾರ್ವಜನಿಕರು ಮರುಬಳಕೆ ಮಾಡಬಹುದಾದ ಕೈಚೀಲಗಳನ್ನು ಉಪಯೋಗಿಸಬೇಕು. ಆ ಮೂಲಕ ಸ್ವಚ್ಛ ಪರಿಸರಕ್ಕೆ ಸಹಕಾರ ನೀಡಬೇಕು ಎಂದು ತಿಳಿಸಿದರು.
    ಪೌರಾಯುಕ್ತ ಬಿ.ಸಿ.ಬಸವರಾಜ್ ಮಾತನಾಡಿ, ಸರ್ಕಾರದ ಆದೇಶದಂತೆ ಪ್ಲಾಸ್ಟಿಕ್‌ಮುಕ್ತ ಮಾಡುವ ನಿಟ್ಟಿನಲ್ಲಿ ನಗರದ ವಿವಿಧ ಭಾಗಗಳಲ್ಲಿ ದಾಳಿ ನಡೆಸಿ ನೂರಾರು ಕೆಜಿ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಗಿದೆ. ಇತ್ತೀಚೆಗೆ ದಂಟರಮಕ್ಕಿ ಸಮೀಪ ಸುಮಾರು 200 ಕೆಜಿ ಪ್ಲಾಸ್ಟಿಕ್ ವಶಪಡಿಸಿಕೊಂಡು ಕ್ರಮ ಕೈಗೊಳ್ಳಲಾಗಿದೆ ಎಂದರು.
    ಎಲ್ಲೆಂದರಲ್ಲಿ ಎಸೆದ ಪ್ಲಾಸ್ಟಿಕ್ ಪರಿಸರವನ್ನು ನಾಶ ಮಾಡುತ್ತಿದೆ. ಪ್ಲಾಸ್ಟಿಕ್ ಕರಗುವ ವಸ್ತುವಲ್ಲ. ಇದು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಜತೆಗೆ ಕರಗದ ಪ್ಲಾಸ್ಟಿಕ್ ತ್ಯಾಜ್ಯ ಜಾನುವಾರುಗಳ ಹೊಟ್ಟೆ ಸೇರಿ ಕಂಟಕವಾಗಲಿದೆ. ಆ ನಿಟ್ಟಿನಲ್ಲಿ ದಿನನಿತ್ಯದ ಬದುಕಲ್ಲಿ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಬೇಕು ಎಂದರು.
    ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಬಸವರಾಜ್, ಆರೋಗ್ಯ ನಿರೀಕ್ಷಕರಾದ ಈಶ್ವರ್, ನಾಗಪ್ಪ, ರಂಗಪ್ಪ, ವೆಂಕಟೇಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts