More

    ಸ್ಪರ್ಧಾತ್ಮಕ ಪರೀಕ್ಷೆ: ಕಾರ್ಮಿಕರ ಮಕ್ಕಳಿಗೆ ಉಚಿತ ತರಬೇತಿ, ಇಲ್ಲಿದೆ ಉಪಯುಕ್ತ ಮಾಹಿತಿ

    ಶಿರಸಿ: ಕಾರ್ಮಿಕ ಇಲಾಖೆಯು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಾರ್ಮಿಕರ ಮಕ್ಕಳಿಗೆ ನೀಡಲಾಗುವ ಯುಪಿಎಸ್​ಸಿ, ಕೆಪಿಎಸ್​ಸಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಉಚಿತ ತರಬೇತಿಗೆ ಮಾ.3ರಂದು ಧಾರವಾಡದಲ್ಲಿ ಚಾಲನೆ ನೀಡಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹೇಳಿದ್ದಾರೆ.

    ಕಾರ್ಮಿಕ ಇಲಾಖೆಯಲ್ಲಿ ಮೊದಲ ಬಾರಿಗೆ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಮಹತ್ವ ನೀಡಲಾಗಿದೆ. ಯುಪಿಎಸ್ಸಿ ಪರೀಕ್ಷೆಗಳಿಗೆ 9 ತಿಂಗಳು, ಕೆಪಿಎಸ್ಸಿ ಪರೀಕ್ಷೆಗಳಿಗೆ 7 ತಿಂಗಳು ಉಚಿತ ತರಬೇತಿ ನೀಡಲು ಕ್ರಮ ವಹಿಸಲಾಗಿದ್ದು, ಈ ಸಂಬಂಧ ಈಗಾಗಲೇ 750 ಅಭ್ಯರ್ಥಿಗಳನ್ನು ಪರೀಕ್ಷೆ ಪ್ರಾಧಿಕಾರದ ಮೂಲಕ ಆಯ್ಕೆ ಮಾಡಲಾಗಿದೆ. ಮ್ಯಾರಿಟ್​ ಹಾಗೂ ರೋಸ್ಟರ್​ ಪದ್ಧತಿ ಮೂಲಕ ಈ ಆಯ್ಕೆ ಮಾಡಲಾಗಿದ್ದು, ಕಲಿಕಾರ್ಥಿಗಳಿಗೆ ತಗಲುವ ವೆಚ್ಚವನ್ನು ಇಲಾಖೆಯಿಂದಲೇ ಭರಿಸಲಾಗುವುದು ಎಂದು ತಿಳಿಸಿದ್ದಾರೆ.

    ತರಬೇತಿ ಸಮಯದಲ್ಲಿ ಬೆಂಗಳೂರು ಕೇಂದ್ರಿತ ವಿದ್ಯಾರ್ಥಿಗಳಿಗೆ 6 ಸಾವಿರ ರೂ., ಉಳಿದೆಡೆ 5 ಸಾವಿರ ರೂ. ಬೋಧನಾ ಸಮಯದ ವೇತನ ನೀಡಲಾಗುವುದು. ಕಾರ್ಮಿಕರ ಮಕ್ಕಳ ಶೈಣಿಕ ಪ್ರಗತಿಗೆ ಈ ತರಬೇತಿ ಮಹತ್ವದ್ದಾಗಿದೆ ಎಂದರು.

    ವಿದ್ಯುತ್​ ಬೇಡಿಕೆ ಹೆಚ್ಚಳ: ರಾಜ್ಯಕ್ಕೆ ಕಾಡಲಿದೆ ಲೋಡ್​ಶೆಡ್ಡಿಂಗ್​?

    ಪೊಲೀಸರನ್ನೇ ಡ್ರಾಪ್ ಕೇಳಿ ಸಿಕ್ಕಿಬಿದ್ದ ಕಳ್ಳರು! ಇದು ಸಿನಿಮಾ ಕಥೆಯಲ್ಲ, ದೊಡ್ಡಬಳ್ಳಾಪುರದಲ್ಲಿ ಹಾಡಹಗಲೇ ನಡೆದ ಘಟನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts