More

  ಸರ್ಕಾರಿ ಬಸ್-ಲಾರಿ ನಡುವೆ ಮುಖಾಮುಖಿ ಡಿಕ್ಕಿ

  ನಂಜನಗೂಡು: ತಾಲೂಕಿನ ದುಗ್ಗಹಳ್ಳಿ ಗೇಟ್ ಸಮೀಪ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿ ನಡುವೆ ಗುರುವಾರ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಲಾರಿ ಚಾಲಕ ಗಂಭೀರವಾಗಿ ಗಾಯಗೊಂಡರೆ, ಬಸ್‌ನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

  ಘಟನೆಯಲ್ಲಿ ಲಾರಿ ಹಾಗೂ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಲಾರಿ ಚಾಲಕನನ್ನು ತುರ್ತು ವಾಹನದ ಮೂಲಕ ಮೈಸೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು.

  ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಹುಲ್ಲಹಳ್ಳಿ ಠಾಣೆ ಪಿಎಸ್‌ಐ ಸುರೇಂದ್ರಕುಮಾರ್, ಸ್ಥಳ ಪರಿಶೀಲನೆ ನಡೆಸಿ ಅಪಘಾತಕ್ಕೀಡಾದ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts