ಕಾಂಗ್ರೆಸ್​ಗೆ ಬಿಗ್​ ಶಾಕ್​: ಎಲ್ಲ ಹುದ್ದೆಗೂ ಗುಲಾಂ ನಬಿ ಆಜಾದ್​ ರಾಜೀನಾಮೆ

Ghulam Nabi Azad
Published on

ನವದೆಹಲಿ: ಕಾಂಗ್ರೆಸ್​ನ ಹಿರಿಯ ಮುಖಂಡ ಗುಲಾಂ ನಬಿ ಆಜಾದ್​ ಅವರು ಕಾಂಗ್ರೆಸ್​ನ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಅವರ ಆಪ್ತ ವಯಲದಲ್ಲಿ ಗುರುತಿಸಿಕೊಂಡಿದ್ದ ಗುಲಾಂ ನಬಿ ಆಜಾದ್​ ಅವರು ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಕೂಡ ಆಗಿದ್ದರು. ಯುಪಿಎ ಸರ್ಕಾರದ ಅವಧಿಯಲ್ಲಿ ಕೇಂದ್ರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಇದೀಗ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್​ಗೆ ಗುಲಾಂ ನಬಿ ಆಜಾದ್​ ಶಾಕ್​ ಕೊಟ್ಟಿದ್ದಾರೆ.

4 ಪುಟಗಳುಳ್ಳ ರಾಜೀನಾಮೆ ಪತ್ರವನ್ನು ಸೋನಿಯಾ ಗಾಂಧಿ ಅವರಿಗೆ ಆಜಾದ್​ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net