More

    ಮುದ್ದೇಬಿಹಾಳದಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಸಾವು, 6 ಮಂದಿ ಅಸ್ವಸ್ಥ

    ಮುದ್ದೇಬಿಹಾಳ: ತಾಲೂಕಿನ ಯರಗಲ್ಲ ಗ್ರಾಮದಲ್ಲಿ ಎರಡು ದಿನಗಳ ಅಂತರದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಕಲುಷಿತ ನೀರು ಸೇವನೆಯೇ ಸಾವಿಗೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಗ್ರಾಮದ ನಲ್ಲಿ ನೀರಿಗೆ ಚರಂಡಿ ನೀರು ಸೇರ್ಪಡೆಯಾಗಿದ್ದು, ಇದೇ ನೀರನ್ನು ಸೇವಿಸಿರುವ ನಿವಾಸಿಗಳು ತೀವ್ರ ಅನಾರೋಗ್ಯಕ್ಕೀಡಾಗಿ ಜೀವಣ್ಮರಣದ ಮಧ್ಯೆ ಹೋರಾಡುವಂತಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

    ಬಾಲಕ ಗುರುರಾಜ ಬಸವರಾಜ ಮಳಗಿ(15) ಶನಿವಾರ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರೆ, ವೃದ್ಧ ಮಹಿಳೆ ನೀಲಮ್ಮ ನಾರಾಯಣಪ್ಪ ಬೆನಕಣ್ಣವರ(65) ಭಾನುವಾರ ಅದೇ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಇನ್ನೂ ಆರು ಜನ ಅಸ್ವಸ್ಥರಾಗಿದ್ದರು. ಅವರಿಗೆ ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಗ್ರಾಮಕ್ಕೆ ವಾಪಸ್ ಕಳುಹಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

    ಮುದ್ದೇಬಿಹಾಳದಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಸಾವು, 6 ಮಂದಿ ಅಸ್ವಸ್ಥ

    ಗ್ರಾಮದಲ್ಲಿ ಮನೆ ಮನೆಗೂ ನೀರು ಪೂರೈಸುವ ಜಲಜೀವನ ಮಿಷನ್ ಅಡಿ ಕಾಮಗಾರಿ ಮಾಡಿರುವ ಗುತ್ತಿಗೆದಾರರು ಗ್ರಾಮದ ಮನೆ ಮನೆಗೂ ನಲ್ಲಿ ಸಂಪರ್ಕ ಕೊಡದೆ ಹಾಗೆ ಗುಂಡಿ ಬಿಟ್ಟು ಹೋಗಿದ್ದರಿಂದ ಗ್ರಾಮಸ್ಥರೇ ಮುಂದಾಗಿ ನಲ್ಲಿ ಸಂಪರ್ಕ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಈ ವೇಳೆ ಕುಡಿವ ನೀರಿನ ಪೈಪ್​ಲೈನ್​ಗೆ ಚರಂಡಿ ನೀರು ಸೇರಿ ಕಲುಷಿತಗೊಂಡಿದೆ ಎಂದೂ ಹೇಳಲಾಗುತ್ತಿದೆ. ಅದನ್ನೆ ಗ್ರಾಮದ ನಿವಾಸಿಗಳು ಗೊತ್ತಾಗದೆ ಸೇವಿಸಿದ್ದು ಈ ಘಟನೆಗೆ ಕಾರಣವಾಗಿದೆ.ಯರಗಲ್ಲ ಗ್ರಾಮದಲ್ಲಿ ಚರಂಡಿಗಳು ತುಂಬಿದ್ದು, ನೀರು ಮುಂದೆ ಹರಿದು ಹೋಗುವಂತೆ ಪಂಚಾಯಿತಿಯವರು ಸ್ವಚ್ಛತೆಗೆ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

    ವಿಜಯನಗರದಲ್ಲಿ ಸಿಡಿಲು ಬಡಿದು ಬಾಲಕ ಸೇರಿ ಮೂವರ ಸಾವು

    ಒಂದೇ ಕುಟುಂಬದ ಐವರು ಆತ್ಮಹತ್ಯೆ: ಮನೆಯ ದೇವರ ಫೋಟೋ ಹಿಂದಿತ್ತು ಮನಕಲಕುವ ದೃಶ್ಯ

    ನನ್ನನ್ನು ಸಾಯಿಸಿ ಬಿಡ್ತಾರೆ ಬೇಗ ಬಾ.. ಎಂದು ಕಣ್ಣೀರಿಟ್ಟ ಪ್ರಿಯಕರ, ಆಕೆ ಬರುವಷ್ಟರಲ್ಲಿ ಶವವೂ ಇರಲಿಲ್ಲ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts