ಸೀಮಂತ ಕಾರ್ಯಕ್ರಮ ವೇಳೆ ಅಡುಗೆ ಸಿಲಿಂಡರ್​ ಸ್ಫೋಟ: ನಾಲ್ವರ ಸಾವು, 19 ಜನರ ಸ್ಥಿತಿ ಗಂಭೀರ

ದೋರನಹಳ್ಳಿ: ಸೀಮಂತ ಕಾರ್ಯಕ್ರಮದಲ್ಲಿ ಅಡುಗೆ ಸಿಲಿಂಡರ್​ ಸ್ಫೋಟಗೊಂಡು ಸಂಭವಿಸಿದ ದುರಂತದಲ್ಲಿ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿದೆ. 19 ಜನರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಕೃಷ್ಣಾ ಭಾಗ್ಯ ಜಲನಿಗಮದ (ಕೆಬಿಜೆಎನ್​ಎಲ್​) ನಿವೃತ್ತ ನೌಕರನ ಮನೆಯಲ್ಲಿ ಶುಕ್ರವಾರ ಬೆಳಗ್ಗೆ ಸೀಮಂತ ಕಾರ್ಯಕ್ರಮ ನಡೆಯುತ್ತಿತ್ತು. ಮನೆ ಹೊರಗಡೆ ಅಡುಗೆಗೆ ಸಿದ್ಧತೆ ವೇಳೆ ಸಿಲಿಂಡರ್​ ಸ್ಫೋಟಗೊಂಡಿದ್ದು, ಸ್ಥಳದಲ್ಲಿದ್ದ 23ಕ್ಕೂ ಹೆಚ್ಚು ಜನರ ಕೈ, ಕಾಲು ಸುಟ್ಟಿವೆ. ಗಾಯಾಳುಗಳನ್ನು ದೋರನಹಳ್ಳಿ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಶಹಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, … Continue reading ಸೀಮಂತ ಕಾರ್ಯಕ್ರಮ ವೇಳೆ ಅಡುಗೆ ಸಿಲಿಂಡರ್​ ಸ್ಫೋಟ: ನಾಲ್ವರ ಸಾವು, 19 ಜನರ ಸ್ಥಿತಿ ಗಂಭೀರ