ಬೆಂಗಳೂರು: ಕರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚತ್ತಲೇ ಇದ್ದು, ಪೊಲೀಸರನ್ನೂ ಬೆಂಬಿಡದೆ ಕಾಡುತ್ತಿದೆ. ಶಾಲೆಗಳಲ್ಲಿ ಕರೊನಾ ಸ್ಫೋಟಗೊಂಡ ಆತಂಕದ ನಡುವೆಯೇ ಪೊಲೀಸ್ ಠಾಣೆಯಲ್ಲೂ ಕರೊನಾ ವ್ಯಾಪಿಸಿದ್ದು, ಮತ್ತಷ್ಟು ಆತಂಕ ಸೃಷ್ಟಿಸಿದೆ. ಪೊಲೀಸ್ ಠಾಣೆಯಯೊಂದರಲ್ಲೇ 14 ಸಿಬ್ಬಂದಿಗೆ ಕರೊನಾ ಸೋಂಕು ತಗುಲಿದೆ!
ಬೆಂಗಳೂರಿನಲ್ಲಿ ಕರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯ ಎಲ್ಲ ಸಿಬ್ಬಂದಿಗೂ ಕರೊನಾ ಟೆಸ್ಟ್(RAT) ಮಾಡಲಾಗಿತ್ತು. ಈ ಪೈಕಿ 14 ಮಂದಿಗೆ ಕರೊನಾ ಸೋಂಕು ಇರುವುದು ಗೊತ್ತಾಗಿದೆ. ಪಿಎಸ್ಐ, ಮೂವರು ಎಎಸ್ಐ, ಹಾಗೂ 10 ಮಂದಿ ಸಿಬ್ಬಂದಿಗೆ ಕರೊನಾ ಪಾಸಿಟಿವ್ ಬಂದಿದೆ.
ಪೊಲೀಸ್ ಠಾಣೆಯನ್ನು ಸ್ಯಾನಿಟೈಸ್ ಮಾಡಲಾಗಿದ್ದು, ಸೋಂಕಿತರನ್ನು ಹೋಂ ಕ್ವಾರಂಟೈನ್ಗೆ ಒಳಪಡಿಸಲಾಗಿದೆ.
ಜೈಲು ಅಧಿಕಾರಿಗಳಿಗೆ ಹೆದರಿ ಮೊಬೈಲ್ ನುಂಗಿದ ಕೈದಿ! ತಿಹಾರ್ ಜೈಲಿನಲ್ಲಿ ಮೊಬೈಲ್ ಸೃಷ್ಟಿಸಿದ ಅವಾಂತರ ಅಷ್ಟಿಷ್ಟಲ್ಲ
ನಾನು ಜೀವಂತವಾಗಿ ವಾಪಸ್ ಬರಲು ಸಹಕರಿಸಿದ್ದಕ್ಕೆ ಥ್ಯಾಂಕ್ಸ್: ಪಂಜಾಬ್ ಸಿಎಂಗೆ ಪ್ರಧಾನಿ ಟಾಂಗ್
ಅದು ನಮ್ಮಿಬ್ಬರ ಕರುಳ ಬಳ್ಳಿ ಜಗಳ, ಅಕ್ಕನ ಮಗಳೋ- ಮಾವನ ಮಗನೋ ಎಂಬಂತೆ ಜಗಳ ಆಗಿದೆ ಅಷ್ಟೇ…
ಹಣಕ್ಕಾಗಿ ಒಂದೂವರೆ ವರ್ಷದಲ್ಲಿ 3 ಮದ್ವೆಯಾದ ಭೂಪ! ಮೈಸೂರಿನ ವಕೀಲನ ಹಿಸ್ಟರಿ ಕೇಳಿದ್ರೆ ಬೆಚ್ಚಿಬೀಳ್ತೀರಿ