ಮೇಕೆದಾಟು ಪಾದಯಾತ್ರೆ ಉದ್ಘಾಟಿಸಿದ್ದ ಮಲ್ಲಿಕಾರ್ಜುನ ಖರ್ಗೆಗೆ ಕರೊನಾ ಪಾಸಿಟಿವ್​

mallikarjuna kharge
Published on

ಬೆಂಗಳೂರು: ಮೇಕೆದಾಟು ಪಾದಯಾತ್ರೆಯ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್​ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕರೊನಾ ಪಾಸಿಟಿವ್​ ದೃಢಪಟ್ಟಿದೆ.

ಈ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರು ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡಿದ್ದು, 'ನಾನು ಕರೊನಾ ಟೆಸ್ಟ್ ಮಾಡಿಸಿಕೊಂಡಿದ್ದು, ವರದಿಯಲ್ಲಿ ಪಾಸಿಟಿವ್​ ಬಂದಿದೆ. ರೋಗ ಲಕ್ಷಣ  ಕಂಡುಬಂದಿಲ್ಲ. ಆದರೆ, ಮನೆಯಲ್ಲೇ ಐಸೋಲೇಶನ್​ ಆಗಿರುವೆ' ಎಂದಿದ್ದಾರೆ.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾವೇರಿ-ಅರ್ಕಾವತಿಯ 'ಸಂಗಮ'ದಿಂದ ಜ.9ರಂದು ಕಾಂಗ್ರೆಸ್​ ಆರಂಭಿಸಿದ ಪಾದಯಾತ್ರೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಪಾಲ್ಗೊಂಡಿದ್ದರು. ಸಂಗಮದಲ್ಲಿ ಆಯೋಜಿಸಿದ್ದ ಬೃಹತ್​ ವೇದಿಕೆಯಲ್ಲಿ ಸಿದ್ದರಾಮಯ್ಯ ಅವರೊಂದಿಗೆ ಮಲ್ಲಿಕಾರ್ಜುನ ಖರ್ಗೆ ಅವರು ನಗಾರಿ ಭಾರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದ್ದರು. ಇದೀಗ ಖರ್ಗೆ ಜತೆಗೆ ಅವರ ದೆಹಲಿಯ ಕಚೇರಿಯಲ್ಲಿ ಐವರಿಗೆ ಕರೊನಾ ಸೋಂಕು ತಗುಲಿದೆ ಎಂದು ಮಾಹಿತಿ ಲಭ್ಯವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net