

ಬೆಂಗಳೂರು: ಮಹಾಮಾರಿ ಕರೊನಾ ಸೋಂಕು ಪೊಲೀಸರನ್ನೂ ಬೆಂಬಿಡದೆ ಕಾಡುತ್ತಿದೆ. ಇದೀಗ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರಿಗೂ ಕರೊನಾ ಸೋಂಕು ತಗುಲಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಗಿರುವ ರವಿ ಡಿ. ಚನ್ನಣ್ಣನವರ್ ಅವರು ನಿನ್ನೆ(ಭಾನುವಾರ) ಕರೊನಾ ಪರೀಕ್ಷೆ ಮಾಡಿಸಿಕೊಂಡಿದ್ದರು. ವರದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ.
ಕರೊನಾ ಪಾಸಿಟಿವ್ ಬಂದ ಹಿನ್ನೆಲೆ ಎಸ್ಪಿ ಸೇರಿದಂತೆ ಅವರ ಜತೆಯಲ್ಲಿದ್ದ ಸಿಬ್ಬಂದಿ ಐಸೋಲೇಷನ್ಗೆ ಒಳಗಾಗಿದ್ದಾರೆ. ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ ಎಂದು ರವಿ ಡಿ. ಚನ್ನಣ್ಣನವರ್ ಮನವಿ ಮಾಡಿದ್ದಾರೆ.