

ಬೆಂಗಳೂರು: ಮಹಾಮಾರಿ ಕರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸ್ಯಾಂಡಲ್ವುಡ್ ನಟ-ನಟಿಯರನ್ನೂ ಕಾಡುತ್ತಿದೆ. ನಟಿ ಶ್ವೇತಾ ಚಂಗಪ್ಪ ಅವರಿಗೆ ಕರೊನಾ ಪಾಸಿಟಿವ್ ಬಂದಿದ್ದು, ಹೋಂ ಕ್ವಾರಂಟೈನ್ನಲ್ಲಿದ್ದಾರೆ.
ಈ ಬಗ್ಗೆ ಸ್ವತಃ ಶ್ವೇತಾ ಚಂಗಪ್ಪ ಅವರೇ ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಕರೊನಾ ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಮನೆಯಲ್ಲೇ ಕ್ವಾರಂಟೈನ್ ಆಗಿರುವೆ. ಅವರು ಕೊಟ್ಟಿರುವ ಔಷಧವನ್ನ ತೆಗೆದುಕೊಳ್ಳುತ್ತಿದ್ದೇನೆ. ನನ್ನೊಂದಿಗೆ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಕೂಡಲೇ ತಪಾಸಣೆ ಮಾಡಿಸಿಕೊಂಡು ಕರೊನಾ ಸೋಂಕು ತಗುಲದಂತೆ ಜಾಗ್ರತೆ ವಹಿಸಿ ಎಂದು ಮನವಿ ಮಾಡಿದ್ದಾರೆ.
ಇತ್ತೀಚಿಗಷ್ಟೆ ಶ್ವೇತಾ ಚಂಗಪ್ಪ ಅವರ ತಂದೆ-ತಾಯಿ ಕರೊನಾ ಲಸಿಕೆ ಪಡೆದಿದ್ದರು. ಈ ಬಗ್ಗೆ ಫೋಟೋ ಸಮೇತ ಮಾಹಿತಿ ಹಂಚಿಕೊಂಡಿದ್ದ ನಟಿ ಶ್ವೇತಾ, ಕರೊನಾ ಲಸಿಕೆ ಪಡೆಯುವಂತೆ ಸಾರ್ವಜನಿಕರಿಗೆ ಕರೆ ನೀಡಿದ್ದರು, ಕರೊನಾ ಸೋಂಕಿನಿಂದ ದೂರ ಇರಿ ಎಂದು ಸಲಹೆ ನೀಡಿದ್ದರು.