

ಬೆಳಗಾವಿ: ಇತ್ತೀಚೆಗಷ್ಟೇ ನಡೆದ ಲೋಕಸಭೆ ಉಪಚುನಾವಣೆಯಲ್ಲಿ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಶಿರಸ್ತೇದಾರ್ ವಿಜಯಶ್ರೀ ನಾಗನೂರಿ ಕೋವಿಡ್ಗೆ ಬಲಿಯಾಗಿದ್ದಾರೆ.
ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ವಿಭಾಗದಲ್ಲಿ ಶಿರಸ್ತೇದಾರ್ ಆಗಿದ್ದ ವಿಜಯಶ್ರೀ ಅವರು ಯಮನಾಪುರದಲ್ಲಿ ವಾಸವಿದ್ದರು. ಬೈ ಎಲೆಕ್ಷನ್ ರಿಸಲ್ಟ್ ಬಂದ ಬಳಿಕ ಮೇ 3ರಂದು ವಿಜಯಶ್ರೀಗೆ ಕರೊನಾ ಸೋಂಕು ದೃಢಪಟ್ಟಿತ್ತು. ಕಳೆದ 10 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಜಯಶ್ರೀ, ಇಂದು ಬೆಳಗ್ಗೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.