More

    15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್​ ಲಸಿಕೆ ಹಾಕುವ ಕಾರ್ಯಕ್ಕೆ ರಾಜ್ಯಾದ್ಯಂತ ಚಾಲನೆ

    ಬೆಂಗಳೂರು: 15 ರಿಂದ 18 ವರ್ಷದೊಳಗಿನ ಮಕ್ಕಳಿಕೆ ಕೋವಿಡ್​ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ರಾಜ್ಯಾದ್ಯಂತ ಇಂದು (ಜ.3) ಚಾಲನೆ ಸಿಕ್ಕಿದ್ದು, ಆರಂಭದಲ್ಲೇ ಉತ್ತಮ ರೆಸ್ಪಾನ್ಸ್​ ವ್ಯಕ್ತವಾಗಿದೆ.

    ಮೊದಲ ದಿನ 4 ಸಾವಿರಕ್ಕೂ ಹೆಚ್ಚು ಕೇಂದ್ರದಲ್ಲಿ 6 ಲಕ್ಷ ಮಕ್ಕಳಿಗೆ ಲಸಿಕೆ ಹಾಕಲು ಉದ್ದೇಶಿಸಲಾಗಿದೆ. ಸರ್ಕಾರದ ಬಳಿ 16 ಲಕ್ಷ ಕೋವ್ಯಾಕ್ಸಿನ್​ ಲಸಿಕಾ ಡೋಸ್​ ದಾಸ್ತಾನಿದ್ದು, ರಾಜ್ಯದಲ್ಲಿ ಒಟ್ಟಾರೆ 2007 ಮತ್ತು 2007ಕ್ಕೆ ಮುನ್ನ ಜನಿಸಿದ 31.75 ಲಕ್ಷ ಮಕ್ಕಳು ಲಸಿಕೆ ಪಡೆಯಲು ಅರ್ಹರಿದ್ದಾರೆ.

    ಬೆಂಗಳೂರಿನ ಮೂಡಲಪಾಳ್ಯದಲ್ಲಿ ಬಿಬಿಎಂಪಿ ಮಹಿಳೆಯರ ಪದವಿ ಮತ್ತು ಸ್ನಾತಕೋತ್ತರ ಕಾಲೇಜು ಆವರಣದಲ್ಲಿ ಮಕ್ಕಳ ಲಸಿಕಾ ಅಭಿಯಾನವನ್ನು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. ಈ ವೇಳೆ ಸಾಂಕೇತಿಕವಾಗಿ 6 ವಿದ್ಯಾರ್ಥಿಗಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಯಿತು.

    ಕಲಬುರಗಿ ಜಿಲ್ಲೆಯಲ್ಲಿ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಲಸೀಕಾಕರಣ ಕಾರ್ಯಕ್ರಮಕ್ಕೆ ಆದರ್ಶ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ. ಮುರುಗೇಶ ನಿರಾಣಿ ಚಾಲನೆ ನೀಡಿದರು. ಸಚಿವ ಸಿ.ಸಿ. ಪಾಟೀಲ್ ಅವರು ಗದಗದ ಎ.ಎಸ್.ಎಸ್ ಕಾಮರ್ಸ್ ಕಾಲೇಜಿನಲ್ಲಿ ಚಾಲನೆ ಕೊಟ್ಟರು. ಹೀಗೆ ರಾಜ್ಯಾದ್ಯಂತ ಜನಪ್ರತಿನಿಧಿಗಳು, ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು, ವೈದ್ಯಾಧಿಕಾರಿಗಳ ತಂಡ ಮಕ್ಕಳಿಗೆ ಕರೊನಾ ವ್ಯಾಕ್ಸಿನ್​ ಕೊಡುವ ಕಾರ್ಯಕ್ಕೆ ಚಾಲನೆ ನೀಡಿವೆ.

    ಕರೊನಾ ಸೋಂಕಿತೆಯ ಪ್ರಾಣ ಉಳಿಸಿತು ವಯಾಗ್ರ ಔಷಧ! 45 ದಿನದ ಬಳಿಕ ಕೋಮಾದಿಂದ ಹೊರ ಬಂದ ನರ್ಸ್​

    ಹೊಸ ವರ್ಷದ ಪಾರ್ಟಿಗೆ 2 ಮೇಕೆ ಕದ್ದ ಎಎಸ್​ಐ! ಮಾಲೀಕನ ಕಣ್ಣೀರಿಗೂ ಕರಗದೆ, ಬಾಡೂಟ ತಿಂದು ತೇಗಿದ್ರು

    ಮೊದಲ ರಾತ್ರಿ ಕನ್ಯತ್ವ ಪರೀಕ್ಷೆ ನಡೆಯುತ್ತಾ? ಕನ್ಯಾಪೊರೆ ಇರಲಿಲ್ಲ ಅಂದ್ರೆ ಏನರ್ಥ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts