ದಾವಣಗೆರೆಯಲ್ಲಿ ಸಾಲುಮರದ ವೀರಾಚಾರಿ ಆತ್ಮಹತ್ಯೆ

salumarada veerachari
Published on

ದಾವಣಗೆರೆ: ಪರಿಸರ ಪ್ರೇಮಿ, ಸಾಲುಮರದ ವೀರಾಚಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹರಿಹರ ತಾಲೂಕಿನ ಮಿಟ್ಲಕಟ್ಟೆ ಗ್ರಾಮದಲ್ಲಿ ಸೋಮವಾರ ಮಧ್ಯರಾತ್ರಿ ನಡೆದಿದೆ.

ದಾವಣಗೆರೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸುಮಾರು 3 ಸಾವಿರ ಮರಗಳನ್ನ ವೀರಾಚಾರಿ ಬೆಳೆಸಿದ್ದರು. ನಿತ್ಯ ಪರಿಸರ ಹಾಗೂ ಮರಗಳ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು. ರಾಜ್ಯೋತ್ಸವ ಸೇರಿದಂತೆ ಹಲವು ಪ್ರಶಸ್ತಿಗಳಿಗೂ ಭಾಜನರಾಗಿದ್ದರು. ಮಿಟ್ಲಕಟ್ಟೆಯಲ್ಲಿ ಪಡಿತರ ವಿತರಣೆಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ವೀರಾಚಾರಿ ಅವರು ಹೊರಾಟ ನಡೆಸುತ್ತಿದ್ದರು. ಆದರೆ ನ್ಯಾಯ ಸಿಗಲಿಲ್ಲ ಎಂದು ಮನನೊಂದು ಮರಕ್ಕೆ ನೇಣಿಗೆ ಶರಣಾಗಿದ್ದಾರೆ.

ನಿಗದಿತ ಪಡಿತರ ಕೊಡದೆ ಕಡಿಮೆ ಕೊಡಲಾಗುತ್ತಿದೆ. ಜನರಿಗೆ ಮೋಸ ಮಾಡಲಾಗುತ್ತಿದೆ. ಈ ಅವ್ಯವಸ್ಥೆಯನ್ನ ಸರಿ ಪಡಿಸಬೇಕೆಂದು ಆಗ್ರಹಿಸಿ ಕಳೆದ ಎರಡು ವರ್ಷದಿಂದ ವೀರಾಚಾರಿ ಹೋರಾಟ ನಡೆಸುತ್ತಿದ್ದರು. ನಿನ್ನೆ(ಸೋಮವಾರ) ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿಯನ್ನೂ ಸಲ್ಲಿಸಿದ್ದರು. ಹೋರಾಟಕ್ಕೆ ನ್ಯಾಯ ಸಿಗಲಿಲ್ಲ ಎಂದು ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹರಿಹರ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net