More

    ರಾಮಮಂದಿರದಲ್ಲಿ ಹೆಚ್ಚಿದ ಭಕ್ತರ ದಂಡು; ಅಯೋಧ್ಯೆಗೆ ಬಸ್​ ಸೇವೆ ಸ್ಥಗಿತ

    ಅಯೋಧ್ಯೆ: ಕೋಟ್ಯಂತರ ಜನರು ಕಾತುರದಿಂದ ಕಾಯುತ್ತಿದ್ದ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಕಾರ್ಯ ಸಂಪನ್ನಗೊಂಡಿದ್ದು, ಬಾಲರಾಮನ ದರ್ಶನ ಪಡೆಯಲು ಭಕ್ತರ ದಂಡೇ ಅಯೋಧ್ಯೆಗೆ ಹರಿದು ಬರುತ್ತಿದೆ. 7 ಸಾವಿರಕ್ಕೂ ಅಧಿಕ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸಾಗರೋಪಾದಿಯಲ್ಲಿ ಬರುತ್ತಿರುವ ಭಕ್ತರನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ.

    ಮಂಗಳವಾರ ಒಂದೇ ಅಯೋಧ್ಯೆಗೆ 5 ಲಕ್ಷ ಮಂದಿ ಭೇಟಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಕ್ಷೇತ್ರದಲ್ಲಿ ಜನದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಉತ್ತರಪ್ರದೇಶ ಸರ್ಕಾರ ತಾತ್ಕಾಲಿಕವಾಗಿ ಬಸ್​ ಸೇವೆಯನ್ನು ಸ್ಥಗಿತಗೊಳಿಸಿ ಆದೇಶಿಸಿದೆ.

    ಇದನ್ನೂ ಓದಿ: ‘ಕೆಡಿ’ ಲೋಕಕ್ಕೆ ಎಂಟ್ರಿ ಕೊಟ್ಟ ಬಾಲಿವುಡ್​ ಬೆಡಗಿ

    ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಅಧಿಕಾರಿಯೊಬ್ಬರು, ಯಾರು ದರ್ಶನಕ್ಕಾಗಿ ಆತುರಪಡುವ ಅಗತ್ಯವಿಲ್ಲ. ಎಲ್ಲರಿಗೂ ರಾಮಲಲ್ಲಾನ ದರ್ಶನ ಭಾಗ್ಯ ಸಿಗಲಿದೆ. ವೃದ್ಧರು ಮತ್ತು ದಿವ್ಯಾಂಗರು ಎರಡು ವಾರಗಳ ನಂತರ ಅಯೋಧ್ಯೆಗೆ ಭೇಟಿ ನೀಡಬೇಕೆಂದು ನಾವು ವಿನಂತಿಸಿಕೊಳ್ಳುತ್ತೇವೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದು, ಈ ಹಿನ್ನಲೆಯಲ್ಲಿ ಬಸ್​ ಸೇವೆಯನ್ನು ಸ್ಥಹಿತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

    ಪ್ರತಿನಿತ್ಯ ಒಂದು ಲಕ್ಷಕ್ಕೂ ಅಧಿಕ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡುವ ನಿರೀಕ್ಷೆಯಿದ್ದು, ಭದ್ರತೆಯನ್ನು ಹೆಚ್ಚಿಸಲಾಗಿದೆ. ದೇವಾಲಯದ ಹೊರಭಾಗದಲ್ಲಿ ಜನರು ಚಳಿಯನ್ನು ಲೆಕ್ಕಿಸದೆ ಬೆಳಗಿನ ಜಾವ 3 ಗಂಟೆಯಿಂದಲೇ ದೇವಸ್ಥಾನದ ಗೇಟ್​ ಬಳಿ ಕುಳಿತಿರುವ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಉತ್ತರ ಪ್ರದೇಶ ಪೊಲೀಸ್, ರಾಪಿಡ್ ಆಕ್ಷನ್ ಫೋರ್ಸ್ (RAF), ಮತ್ತು ಸಶಸ್ತ್ರ ಸೀಮಾ ಬಲ್ (SSB)ಯ ಸುಮಾರು 7 ಸಾವಿರ ಸಿಬ್ಬಂದಿಯನ್ನು ದೇವಾಲಯದ ಸುತ್ತ ಭದ್ರೆತೆಗೆ ನಿಯೋಜಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts