ಅಂತ್ಯಸಂಸ್ಕಾರಕ್ಕೆ ಚಿತೆ ತಯಾರಿ ನಡೆಯುತ್ತಿತ್ತು… ಅಷ್ಟರಲ್ಲಿ ಆತ ಕಣ್ಣುಬಿಟ್ಟು ಉಸಿರಾಡಿದ!

ಕಾಸರಗೋಡು: ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಮೃತಪಟ್ಟ ಹಿನ್ನೆಲೆಯಲ್ಲಿ ಆತನ ಕುಟುಂಬಸ್ಥರು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದರು. ಇನ್ನೇನು ಅಂತಿಮ ಕಾರ್ಯ ನಡೆಯಬೇಕು ಅನ್ನುವಷ್ಟರಲ್ಲಿ ಆತ ಕಣ್ಣುಬಿಟ್ಟು, ಉಸಿರಾಡಿದ್ದಾನೆ… ಇಂತಹ ಘಟನೆ ಮಂಗಳೂರಲ್ಲಿ ಸಂಭವಿಸಿದೆ. ಈಗ ಆ ರೋಗಿಯನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ. ಕಾಸರಗೋಡು ಜಿಲ್ಲೆಯ ಬದಿಯಡ್ಕ ವಾಂತಿಚ್ಚಾಲ್​ ನಿವಾಸಿ, ಕೂಲಿಕಾಮಿರ್ಕ ಗುರುವ(60) ಎಂಬವರನ್ನು ಅಸೌಖ್ಯದ ಹಿನ್ನೆಲೆಯಲ್ಲಿ ಸೋಮವಾರ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮಂಗಳವಾರ ತಪಾಸಣೆ ನಡೆಸಿದ ವೈದ್ಯರು, … Continue reading ಅಂತ್ಯಸಂಸ್ಕಾರಕ್ಕೆ ಚಿತೆ ತಯಾರಿ ನಡೆಯುತ್ತಿತ್ತು… ಅಷ್ಟರಲ್ಲಿ ಆತ ಕಣ್ಣುಬಿಟ್ಟು ಉಸಿರಾಡಿದ!