More

    ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹ: ಶಿಗ್ಗಾವಿಯಲ್ಲಿ ಬೃಹತ್​ ಪ್ರತಿಭಟನೆ, ಸಿಎಂ ಮನೆಯತ್ತ ಹೊರಟ ಮೆರವಣಿಗೆ

    ಹಾವೇರಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಮಂಗಳವಾರ ಶಿಗ್ಗಾವಿಯಲ್ಲಿ ಬೃಹತ್​ ಪ್ರತಿಭಟನೆ ನಡೆಯುತ್ತಿದೆ.

    ಶಿಗ್ಗಾವಿಯ ಚನ್ನಮ್ಮ ವೃತ್ತದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸಮಾಜದ ಬಾಂಧವರು ಜಮಾಯಿಸಿದ್ದಾರೆ. ಚನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪ್ರತಿಭಟನಾ ರ್ಯಾಲಿಗೆ ಚಾಲನೆ ನೀಡಲಾಯಿತು. ಮಾಜಿ ಸಚಿವ ವಿನಯ್ ಕುಲಕರ್ಣಿ, ಮಾಜಿ ಶಾಸಕ ವಿಜಯಾನಂದ ಕಾಶೆಪ್ಪನವರ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದಾರೆ. ಚನ್ನಮ್ಮ ವೃತ್ತದಿಂದ ಸಿಎಂ ಬಸವರಾಜ ಬೊಮ್ಮಾಯಿ ಅವರ ನಿವಾಸದತ್ತ ಪ್ರತಿಭಟನಾ ಮೆರವಣಿಗೆ ಹೊರಟಿದೆ.

    ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹ: ಶಿಗ್ಗಾವಿಯಲ್ಲಿ ಬೃಹತ್​ ಪ್ರತಿಭಟನೆ, ಸಿಎಂ ಮನೆಯತ್ತ ಹೊರಟ ಮೆರವಣಿಗೆ

    ಇದೇ ವೇಳೆ ದಿಗ್ವಿಜಯ ನ್ಯೂಸ್​ ಜತೆ ಮಾತನಾಡಿದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ, ಅಧಿವೇಶನದಲ್ಲಿ ಬಸವನಗೌಡ ಪಾಟೀಲ್ ಯತ್ನಾಳ್​ರ ಪ್ರಶ್ನೆಗೆ ಸಿಎಂ ಉತ್ತರ ನೀಡಬೇಕು. ಯಾವಾಗ ಮೀಸಲಾತಿ ನೀಡುತ್ತೇವೆ ಎಂದು ಭರವಸೆ ಕೊಡಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಯತ್ನಾಳ್​ರಿಂದ ನಮಗೆ ಸಂದೇಶ ಬರಬೇಕು. ಇಲ್ಲವಾದರೆ ಆಕ್ಟೋಬರ್-ನವೆಂಬರ್‌ನಲ್ಲಿ ಉಗ್ರ ಹೋರಾಟ ಮಾಡುತ್ತೇವೆ. ವಿಧಾನಸೌದಕ್ಕೆ ಮುತ್ತಿಗೆ ಹಾಕುತ್ತೇವೆ. ನಮ್ಮ ಸಮಾಜದ ಶಕ್ತಿ ಏನು ಎಂದು ಅಂದು ತೋರಿಸುತ್ತೇವೆ ಎಂದು ಎಚ್ಚರಿಸಿದರು.

    ಈಗಾಗಲೇ ನಮ್ಮ ಸಮಾಜದ ಶಕ್ತಿ ಏನೆಂದು ಯಡಿಯೂರಪ್ಪ ಅವರಿಗೆ ಗೊತ್ತಾಗಿದೆ. ಸಿಸಿ ಪಾಟೀಲ್​ರ ಹೇಳಿಕೆಯಿಂದ ನೋವಾಗಿದೆ. ಆದರೂ ಸಮಾಜದ ಒಳಿತಿಗಾಗಿ ಶ್ರಮಿಸುವೆ. ಹೋರಾಟಕ್ಕೆ ಸಿಸಿ ಪಾಟೀಲ್​ ಬಹಳ ಬೆಂಬಲ ನೀಡಿದ್ದಾರೆ. ಮಾತುಕತೆ ಮೂಲಕ ಎಲ್ಲವನ್ನೂ ಸರಿ ತೂಗಿಸುತ್ತೇವೆ ಎಂದು ಶ್ರೀಗಳು ಹೇಳಿದರು.

    ಒಂದು ವಾರದ ಅಂತರದಲ್ಲಿ ಎರಡು ಕರುಗಳಿಗೆ ಜನ್ಮ ನೀಡಿದ ಎಮ್ಮೆ! ಸಾಗರದಲ್ಲಿ ಅಪರೂಪದ ಪ್ರಕರಣ

    ಗಣೇಶೋತ್ಸವ ಮೆರವಣಿಗೆಯಲ್ಲಿ ಕುಣಿದು ಕುಪ್ಪಳಿಸುತ್ತಲೇ ಪ್ರಾಣ ಬಿಟ್ಟ! ಡಿಜೆ ಸೌಂಡ್ಸ್​ ಎಫೆಕ್ಟ್​ಗೆ ಹೃದಯಾಘಾತ?

    ಹುಳಿಯಾರು ಪೊಲೀಸ್​ ಠಾಣೆಯ ಸುಧಾ ಕೊಲೆ ಕೇಸ್​ಗೆ ಟ್ವಿಸ್ಟ್​: ಸುಪಾರಿ ಕೊಟ್ಟದ್ದು ಅದೇ ಠಾಣೆಯ ಮತ್ತೊಬ್ಬ ಮಹಿಳಾ ಪೇದೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts