

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕರೊನಾ ಭೀತಿ ನಡುವೆಯೂ ಡೆಂಘೆ ಜ್ವರ ಆತಂಕ ತಂದೊಡ್ಡಿದ್ದು, ಒಂಬತ್ತು ವರ್ಷದ ಬಾಲಕಿ ದುರಂತ ಅಂತ್ಯ ಕಂಡಿದ್ದಾಳೆ.
ಕೆ.ಆರ್. ತಾಲೂಕಿನ ಬೊಮ್ಮೆನಹಳ್ಳಿ ಗ್ರಾಮದ ಶಿವನಂಜು ಎಂಬುವರ ಪುತ್ರಿ ಸ್ಪಂದನಾ(9) ಮೃತ ದುರ್ದೈವಿ. ಮೂರು ನಾಲ್ಕು ದಿನಗಳಿಂದ ಡೆಂಘೆ ಜ್ವರದಿಂದ ಬಳಲುತ್ತಿದ್ದ ಸ್ಪಂದನಾ, ಭೇರ್ಯ ಗ್ರಾಮದ ಖಾಸಗಿ ಕ್ಲಿನಿಕ್ನಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಸದೆ ಮೃತಪಟ್ಟಿದ್ದಾಳೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಮಹೇಂದ್ರಪ್ಪ ಮಾಹಿತಿ ನೀಡಿದ್ದಾರೆ.