More

    ದೇವಸ್ಥಾನದ ಕಾಣಿಕೆ ಹುಂಡಿಗೆ 2 ಸಾವಿರ ರೂ. ಮುಖಬೆಲೆಯ ಜೆರಾಕ್ಸ್ ನೋಟು ಹಾಕಿದ ಭಕ್ತ

    ಚಿಕ್ಕಮಗಳೂರು: ಎರಡು ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ವಾಪಸ್ ಪಡೆಯುವುದಾಗಿ ಆರ್‌ಬಿಐ ಘೋಷಿಸಿದೆ. ಇದರ ಬೆನ್ನಲ್ಲೆ, ಹರಕೆ ಹೊತ್ತ  ಭಕ್ತನೊಬ್ಬ ಜೆರಾಕ್ಸ್ ನೋಟನ್ನು ಕಳಸೇಶ್ವರ ದೇವರ ಕಾಣಿಕೆ ಹುಂಡಿಗೆ ಹಾಕಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

    ಇದನ್ನೂ ಓದಿ: ಸಹೋದರನಿಗೆ ದುಬಾರಿ ಬೆಲೆಯ ಕಾರು ಗಿಫ್ಟ್ ನೀಡಿದ ನಟಿ

    ದಕ್ಷಿಣ ಕಾಶಿ ಕಳಸೇಶ್ವರ ದೇವಾಲಯದ ಆವರಣದಲ್ಲಿರುವ ಕಾಣಿಕೆ ಡಬ್ಬದಲ್ಲಿ  2000 ರೂ. ಮುಖ ಬೆಲೆಯ ಜೆರಾಕ್ಸ್ ನೋಟು ಪತ್ತೆಯಾಗಿದೆ.ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕಳಸೇಶ್ವರ ದೇವಾಲಯದಲ್ಲಿ ಘಟನೆ ನಡೆದಿದ್ದು, ಸ್ಥಳೀಯರು ಆಶ್ಚರ್ಯವ್ಯಕ್ತಪಡಿಸಿದ್ದಾರೆ.

    ಇದನ್ನೂ ಓದಿ: ಏರ್ ಇಂಡಿಯಾ ವಿಮಾನದಲ್ಲಿ ಈರುಳ್ಳಿ ವಾಸನೆ: ತುರ್ತು ಭೂಸ್ಪರ್ಶ ಮಾಡಿದ ಪ್ಲೈಟ್

    ಹುಂಡಿಯ ಹಣ ಎಣಿಕೆ ಕಾರ್ಯದ ವೇಳೆ ನಕಲಿ ನೋಟು ಪತ್ತೆ ಬಳಿಕ ಜೆರಾಕ್ಸ್ ನೋಟನ್ನು ಆಡಳಿತ ಮಂಡಳಿ ಸದಸ್ಯರು ಹರಿದು ಹಾಕಿದ್ದಾರೆ. ಕಲರ್ ಜೆರಾಕ್ಸ್ ನೋಡಿ ದೇವಾಲಯದ ಆಡಳಿತ ಮಂಡಳಿ ಸದಸ್ಯರಿಗೆ ಶಾಕ್ ಆಗಿದ್ದಾರೆ.

    ಕಾಣಿಕೆ ಹುಂಡಿಲ್ಲಿ ಈ ಹಿಂದೆ ಪತ್ರಗಳು, ನಕಲಿ ನೋಟುಗಳು ಪತ್ತೆಯಾಗಿರುವ ಹಲವಾರು ಪ್ರಕರಣಗಳು ನಮ್ಮ ಮುಂದಿವೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts