ದೇವೇಗೌಡರ ನಿವಾಸಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಭೇಟಿ

devegowda
Published on

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ನಿವಾಸಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ಭೇಟಿ ನೀಡಿ ದೇವೇಗೌಡರ ಯೋಗಕ್ಷೇಮ ವಿಚಾರಿಸಿದರು.

ದೇವೇಗೌಡರ ಪದ್ಮನಾಭನಗರ ನಿವಾಸಕ್ಕೆ ಬುಧವಾರ ಆಗಮಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಮತ್ತು ಉಪಾಧ್ಯಕ್ಷ ಡಾ.ಸುರೇಂದ್ರ ಕುಮಾರ್ ಅವರು ಕೆಲ ಕಾಲ ದೇವೇಗೌಡರ ಜತೆ ಮಾತುಕತೆ ನಡೆಸಿದರು. ಶೀಘ್ರವೇ ಸಂಪೂರ್ಣ ಗುಣಮುಖರಾಗಲೆಂದು ಹಾರೈಸಿದರು.

ಮಂಡಿನೋವಿನಿಂದ ಬಳಲುತ್ತಿರುವ ದೇವೇಗೌಡರು ಕೆಲ ದಿನಗಳಿಂದ ಮನೆಯಲ್ಲೇ ಇದ್ದಾರೆ. ಯಾವುದೇ ಸಭೆ-ಸಮಾರಂಭಗಳಿಗೂ ಹಾಜರಾಗುತ್ತಿರಲಿಲ್ಲ. ಇತ್ತೀಚಿಗೆ ಅವರ ಆರೋಗ್ಯದಲ್ಲಿ ಚೇರಿಕೆ ಕಂಡುಬಂದಿದ್ದು, ಕಳೆದ ಶನಿವಾರ(ಅ.8) ರಂದು ಬೆಂಗಳೂರಿನ ನ್ಯಾಷನಲ್​ ಕಾಲೇಜು ಮೈದಾನದಲ್ಲಿ ನಡೆದ 'ಜನತಾ ಮಿತ್ರ' ಸಮಾರೋಪ ಸಮಾರಂಭಕ್ಕೆ ಪಾಲ್ಗೊಂಡು 'ನನಗಿನ್ನೂ ಹೊರಾಡುವ ಶಕ್ತಿ ಇದೆ..' ಎಂದು ಪಕ್ಷದ ಕಾರ್ಯಕರ್ತರಿಗೆ ಧೈರ್ಯ ತುಂಬಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net