More

  ಶಿಸ್ತುಬದ್ಧ ಜೀವನ ರೂಢಿಸಿಕೊಂಡರೆ ಯಶಸ್ಸು

  ಕುಶಾಲನಗರ : ಕೊಡಗು ಜಿಲ್ಲಾ ಕ್ರೈಸ್ತ ಸೇವಾ ಸಂಘದ ಕುಶಾಲನಗರ ಘಟಕದಿಂದ ಮುಳ್ಳುಸೋಗೆ ತಪೋವನ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಗರಿಷ್ಠ ಅಂಕಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಭಾನುವಾರ ಹಮ್ಮಿಕೊಳ್ಳಲಾಗಿತ್ತು.

  ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್‌ಗೌಡ ಮಾತನಾಡಿ, ಶಿಕ್ಷಣ ಕೇವಲ ಪಠ್ಯ ಪುಸ್ತಗಳಿಗೆ ಮಾತ್ರ ಸೀಮಿತವಾಗಬಾರದು. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕೌಶಲದೊಂದಿಗೆ ಶಿಸ್ತುಬದ್ಧ ಜೀವನ ರೂಢಿಸಿಕೊಂಡಾಗ ಯಶಸ್ಸು ಗಳಿಸಲು ಸಾಧ್ಯ. ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಅವಕಾಶ ವಂಚಿತ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೂ ಕಾಳಜಿ ವಹಿಸಬೇಕಿದೆ ಎಂದರು.

  ಕೊಡಗು ಜಿಲ್ಲಾ ಕ್ರೈಸ್ತ ಸೇವಾ ಸಂಘದ ಅಧ್ಯಕ್ಷ ಕೆ.ಟಿ.ಬೇಬಿ ಮ್ಯಾಥ್ಯು ಮಾತನಾಡಿ, ಕೊಡಗು ಜಿಲ್ಲಾ ಕ್ರೈಸ್ತ ಸೇವಾ ಸಂಘ ರಾಜಕೀಯ ರಹಿತವಾಗಿ ಸರ್ಕಾರದ ಸೌಲಭ್ಯಗಳನ್ನು ಸಮುದಾಯದ ಎಲ್ಲರಿಗೂ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡಿಕೊಂಡು ಬರುತ್ತಿದೆ ಎಂದರು.

  ಕುಶಾಲನಗರ ಪುರಸಭಾ ಸದಸ್ಯ ಪ್ರಮೋದ್ ಮುತ್ತಪ್ಪ ಮಾತನಾಡಿ, ಮಕ್ಕಳನ್ನು ಸುಶಿಕ್ಷಿತರಾಗಿಸುವುದರೊಂದಿಗೆ ಉತ್ತಮ ನಾಗರಿಕರನ್ನಾಗಿಸುವ ಅಗತ್ಯವಿದೆ. ಕೇವಲ ಅಂಕಗಳಿಕೆಗೆ ಸೀಮಿತಗೊಳಿಸದೆ ಅವರಲ್ಲಿ ಸಾಮಾಜಿಕ ಮೌಲ್ಯಗಳನ್ನು ಬಿತ್ತಬೇಕಿದೆ ಎಂದರು.

  ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ವಿ.ಪಿ.ಶಶಿಧರ್ ಮಾತನಾಡಿ, ದೇಶದ ಭವಿಷ್ಯತ್ತಿನ ನಿರ್ಮಾತೃಗಳಾದ ಯುವ ಸಮೂಹದಲ್ಲಿ ಸಾಮಾಜಿಕ ಬದ್ಧತೆ, ಹೊಣೆಗಾರಿಕೆ, ನೈತಿಕತೆ, ಉತ್ತಮ ಸಂಸ್ಕಾರ ಬಿತ್ತನೆ ಮಾಡಬೇಕಿದೆ. ಕೇವಲ ಅಂಕಗಳಿಂದ ವಿದ್ಯಾರ್ಥಿಗಳ ಪ್ರತಿಭೆಗಳನ್ನು ಅಳೆಯುವ ಪರಿಪಾಠ ಕಡಿಮೆಯಾಗಬೇಕಿದೆ ಎಂದರು.

  ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಸಂಘದ ಅಧ್ಯಕ್ಷ ಜಾನ್ಸನ್ ಪಿಂಟೋ ಮಾತನಾಡಿದರು. ಕ್ರೈಸ್ತ ಸೇವಾ ಸಂಘದ ಕುಶಾಲನಗರ ಘಟಕದ ಅಧ್ಯಕ್ಷ ಎನ್.ಟಿ.ಜೋಸೆಫ್ ಅಧ್ಯಕ್ಷತೆ ವಹಿಸಿದ್ದರು.

  ತಪೋವನದ ಫಾ.ಜೋಸೆಫ್, ಫಾ.ಲಾರೆನ್ಸ್ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು. ವೈದ್ಯರಾದ ಡಾ.ರೂಬಲ್ ಕೋಟ್ಸ್, ಡಾ.ಪ್ರಣಿತ ಸಲ್ಡಾನ, ರಾಜ್ಯಮಟ್ಟದ ಚೆಸ್ ಆಟಗಾರ ಎ.ಅಗಸ್ಟಿನ್ ಸೇರಿದಂತೆ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಸನ್ಮಾನಿಸಿ, ಪ್ರೋತ್ಸಾಹ ಧನ ವಿತರಿಸಲಾಯಿತು.

  See also  ಆಲಸ್ಯವೇ ಮನುಷ್ಯನ ದೊಡ್ಡ ಶತ್ರು

  ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೈಸರ್ ಪೋರ್ಶೆರಾ, ಕ್ರೈಸ್ತ ಸಂಘದ ಉಪಾಧ್ಯಕ್ಷ ಪ್ಯಾಟ್ರಿಕ್, ಕಾರ್ಯದರ್ಶಿ ಸಲೀನಾ ಡಿ ಕುನ್ನಾ, ಸಹ ಕಾರ್ಯದರ್ಶಿ ಜೇಮ್ಸ್ ಡಿಸೋಜ, ಖಜಾಂಚಿ ಆಲ್ಬರ್ಟ್ ಗೋನ್ಸಲ್ವೆಸ್ ಸೇರಿದಂತೆ ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts