ಓಪನ್​ ಹಾರ್ಟ್​ ಸರ್ಜರಿ: ಐದು ರೂಪಾಯಿ ಡಾಕ್ಟರ್​ ಖ್ಯಾತಿಯ ಡಾ.ಶಂಕರೇಗೌಡರ ಆರೋಗ್ಯದಲ್ಲಿ ಚೇತರಿಕೆ

Doctor Shankare Gowda
Published on

ಮಂಡ್ಯ: ಹೃದಯಾಘಾತದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ "ಐದು ರೂಪಾಯಿ ಡಾಕ್ಟರ್​'' ಖ್ಯಾತಿಯ ಡಾ.ಶಂಕರೇಗೌಡ ಅವರು ಓಪನ್​ ಹಾರ್ಟ್​ ಸರ್ಜರಿ(ತೆರೆದ ಹೃದಯ ಶಸ್ತ್ರಚಿಕಿತ್ಸೆ) ಬಳಿಕ ಚೇತರಿಸಿಕೊಳ್ಳುತ್ತಿದ್ದಾರೆ.

ಕೆಲ ದಿನದ ಹಿಂದೆ ಅನಾರೋಗ್ಯದಿಂದ ಮೈಸೂರು ಮತ್ತು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದಿದ್ದ ಶಂಕರೇಗೌಡ ಅವರಿಗೆ ಜೂ.19ರಂದು ಬೆಂಗಳೂರಿನ ಪೋರ್ಟಿಸ್​ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಅಂದಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ದಿನದಿಂದ ದಿನಕ್ಕೆ ಚೇತರಿಸಿಕೊಳ್ಳುತ್ತಿದ್ದಾರೆ.

ಮೇ 23ರಂದು ಶಂಕರೇಗೌಡರಿಗೆ ಲಘು ಹೃದಯಾಘಾತವಾಗಿದ್ದ ಹಿನ್ನೆಲೆಯಲ್ಲಿ ಮೈಸೂರಿನ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆಂದು ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಅವರ ಆರೋಗ್ಯದಲ್ಲಿ ಸುಧಾರಣೆ ಕಂಡಿತ್ತು. ಈ ಹಿನ್ನೆಲೆಯಲ್ಲಿ ಮೇ 30ರಂದು ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿದ್ದರು. ಈ ವೇಳೆ ಶಂಕರೇಗೌಡರಿಗೆ ತೆರೆದ ಹೃದಯ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳುವಂತೆ ಹೃದ್ರೋಗ ತಜ್ಞರು ಸೂಚಿಸಿದ್ದರು. ಹೃದ್ರೋಗ ತಜ್ಞರ ಸಲಹೆ ಮೇರೆಗೆ ಜೂ.19ರಂದು ಶಸ್ತ್ರ ಚಿಕಿತ್ಸೆಗೆ ಶಂಕರೇಗೌಡರು ಒಳಗಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net