

ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟಕ್ಕೆ ಬೈಕ್ನಲ್ಲಿ ತೆರಳುವಾಗ ನಾಯಿ ಅಡ್ಡ ಬಂದ ಪರಿಣಾಮ ಬೈಕ್ ಸವಾರರಿಬ್ಬರು ದುರಂತ ಅಂತ್ಯ ಕಂಡಿದ್ದಾರೆ.
ಚಾಮರಾಜನಗರ ತಾಲೂಕಿನ ಮಾದಾಪುರ ಬಳಿ ಶುಕ್ರವಾರ ಈ ದುರಂತ ಸಂಭವಿಸಿದೆ. ಕಟ್ನವಾಡಿ ಗ್ರಾಮದ ಶಿವಮೂರ್ತಿ(46) ಮತ್ತು ಮಹದೇವಪ್ಪ (55) ಮೃತ ದುರ್ದೈವಿಗಳು.
ಇವರಿಬ್ಬರೂ ಬೈಕ್ನಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದರು. ಮಾರ್ಗಮಧ್ಯೆ ರಸ್ತೆಯಲ್ಲಿ ಬೈಕ್ಗೆ ನಾಯಿ ಅಡ್ಡ ಬಂದಿದ್ದು, ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡ ಶಿವಮೂರ್ತಿ ಸ್ಥಳದಲ್ಲೇ ಮೃತಪಟ್ಟರು. ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮಹದೇವಪ್ಪ ಕೊನೆಯುಸಿರೆಳೆದರು. ಚಾಮರಾಜನಗರ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.