ಅನುಶ್ರೀ ವಿರುದ್ಧ ನಾನು ಹೇಳಿಕೆ ನೀಡಿಲ್ಲ, ಚಾರ್ಜ್​ಶೀಟ್​ನಲ್ಲಿ ಇರೋದು ಸುಳ್ಳು: ಕಿಶೋರ್ ಶೆಟ್ಟಿ ಸ್ಫೋಟಕ ಹೇಳಿಕೆ

anushree1
Published on

ಮಂಗಳೂರು: ಅನುಶ್ರೀ ಹೆಸರು ತಳುಕು ಹಾಕಿಕೊಂಡಿದ್ದ ಡ್ರಗ್​ ಕೇಸ್​ಗೆ ಸ್ಫೋಟಕ ತಿರುವು ಸಿಕ್ಕಿದೆ. ನಾನು ಅನುಶ್ರೀ ವಿರುದ್ಧ ಆ ತರ ಯಾವುದೇ ಹೇಳಿಕೆ ನೀಡಿಲ್ಲ. ಸಿಸಿಬಿ ಪೊಲೀಸರು ಚಾರ್ಜ್​ಶೀಟ್​ನಲ್ಲಿ ನನ್ನ ಹೆಸರಲ್ಲಿ ದಾಖಲಿಸಿರುವ ಹೇಳಿಕೆ ಎಲ್ಲವೂ ಸುಳ್ಳು ಎಂದು ಆರೋಪಿ ಕಿಶೋರ್ ಅಮನ್ ಶೆಟ್ಟಿ ಹೇಳಿದ್ದಾರೆ.

'ದಿಗ್ವಿಜಯ ನ್ಯೂಸ್​' ಜತೆ ಮಾತನಾಡಿದ ಕಿಶೋರ್​, ಅನುಶ್ರೀಗೂ ಡ್ರಗ್ಸ್ ಕೇಸ್​ಗೂ ಯಾವುದೇ ಸಂಬಂಧ ಇಲ್ಲ. ಚಾರ್ಜ್ ಶೀಟ್​​ನಲ್ಲಿ ಬಂದಿರುದೆಲ್ಲವೂ ಸಂಪೂರ್ಣ ಸುಳ್ಳು. ನಾವು ಯಾವುದೇ ಡ್ರಗ್ಸ್ ಪಾರ್ಟಿ ಮಾಡಿಲ್ಲ. ಅನುಶ್ರೀ ಅಂತಹ ಹುಡುಗಿಯೂ ಅಲ್ಲ. ಅನುಶ್ರೀ ಜತೆ ಡ್ರಿಂಕ್ಸ್, ಡ್ರಗ್ಸ್ ಪಾರ್ಟಿ ಮಾಡಿಲ್ಲ. ನಾನು ಅನುಶ್ರೀಗೆ ಕೇವಲ ಕೊರಿಯೋಗ್ರಾಫ್ ಮಾಡುತ್ತಿದ್ದೆ. ಆಮೇಲೆ ಅನುಶ್ರೀಯವರ ಜತೆ ಸಂಬಂಧ ಇಲ್ಲ. ಈಗ ಹಬ್ಬಿರುವ ಸುಳ್ಳು ವಿಚಾರದ ಹಿಂದೆ ಬೇರೆ ಯಾರೋ ಇರಬಹುದು. ನಾನು ಎರಡು ಬಾರಿ ಡ್ರಗ್ಸ್ ತೆಗೆದುಕೊಂಡಿದ್ದೇನೆ. ಆದ್ರೆ ಅನುಶ್ರೀ ತೆಗೆದುಕೊಂಡಿಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net