

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ರೋಷನ್ ಬೇಗ್ ನಿವಾಸದ ಮೇಲೂ ಇಂದು ಬೆಳ್ಳಂಬೆಳಗ್ಗೆ ಇಡಿ(ಜಾರಿ ನಿರ್ದೇಶನಾಲಯ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ರ ನಿವಾಸ, ಪ್ಲ್ಯಾಟ್ಗಳು, ಕಚೇರಿ ಮೇಲೂ ಏಕಕಾಲಕ್ಕೆ ದಾಳಿ ಮಾಡಿದ ಅಧಿಕಾರಿಗಳು ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ.
ಇತ್ತ ರೋಷನ್ ಬೇಗ್ರ ಮನೆ ಸೇರಿದಂತೆ ಬೆಂಗಳೂರಿನ ಆರು ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಐಎಂಎ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ರೋಷನ್ ಬೇಗ್ರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಐಎಂಎ ಸಕ್ಷಮ ಪ್ರಾಧಿಕಾರದ ಮುಖ್ಯಸ್ಥರು ಈ ಹಿಂದೆ ಸರ್ಕಾರದ ಅನುಮತಿ ಕೋರಿದ್ದರು, ಇದೀಗ ಇಡಿ ಅಧಿಕಾರಿಗಳು ರೋಷನ್ಗೆ ಮತ್ತೊಂದು ಶಾಕ್ ಕೊಟ್ಟಿದ್ದಾರೆ. ರೋಷನ್ ಬೇಗ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಮಾಹಿತಿ ಲಭ್ಯವಾಗಿದೆ.