More

    ಸಮವಸ್ತ್ರ ಧರಿಸದಿದ್ರೆ ಕಾಲೇಜಿಗೆ ಪ್ರವೇಶವಿಲ್ಲ.. ದಯವಿಟ್ಟು ಶಿಕ್ಷಣ ಕ್ಷೇತ್ರವನ್ನ ಹಾಳು ಮಾಡ್ಬೇಡಿ: ಸಿದ್ದು ವಿರುದ್ಧ ಶಿಕ್ಷಣ ಸಚಿವ ಗರಂ

    ಬೆಂಗಳೂರು: ಶಿಕ್ಷಣ ಬೇಕಾದರೆ ಸರ್ಕಾರ ನಿಗದಿ ಮಾಡಿರುವ ಸಮವಸ್ತ್ರ ಧರಿಸಿ ತರಗತಿಗಳಿಗೆ ಹಾಜರಾಗಲಿ. ನಿಯಮ ಉಲ್ಲಂಘಿಸಿದರೆ ಕಾಲೇಜು ಪ್ರವೇಶಕ್ಕೆ ಅವಕಾಶವೇ ಇಲ್ಲ ಎಂದು ಶಿಕ್ಷಣ ಸಚಿವ ಬಿ‌.ಸಿ.ನಾಗೇಶ್ ಎಚ್ಚರಿಸಿದ್ದಾರೆ.

    ಹಿಜಾಬ್​ ವಿವಾದ ಕುರಿತು ಶುಕ್ರವಾರ ಪ್ರತಿಕ್ರಿಯಿಸಿದ ನಾಗೇಶ್​, ಧರ್ಮ ಪಾಲನೆಗೆ ನಮ್ಮ ವಿರೋಧವಿಲ್ಲ. ಆದರೆ ಶಾಲೆಗೆ ಶಿಕ್ಷಣಕ್ಕಾಗಿ ಬರಬೇಕು. ಆ ರೀತಿ ಬರುವಾಗ ಸಮವಸ್ತ್ರ ಧರಿಸಿಯೇ ಬರಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಅಲ್ಲಿನ ನಿಯಮಗಳನ್ನು ಪಾಲಿಸಬೇಕು. ಈ ಸಂಬಂಧ ಹೈಕೋರ್ಟ್‌ ನೀಡುವ ತೀರ್ಪು ಆಧರಿಸಿ ಹೊಸ ನಿಯಮಗಳನ್ನು ಮಾಡುತ್ತೇವೆ. ಅಲ್ಲಿಯವರೆಗೆ ಈಗಿರುವ ನಿಯಮವೇ ಮುಂದುವರಿಯುತ್ತದೆ ಎಂದರು.

    ದೇಶದ ಸಮಗ್ರತೆ ಹಾಳು ಮಾಡಲು ಪಿತೂರಿ ನಡೆಯುತ್ತಿದೆ. ಹಿಜಾಬ್‌ ವಿವಾದ ಬಳಸಿ ಘರ್ಷಣೆ ಸೃಷ್ಟಿಸುವ ಹುನ್ನಾರವೂ ನಡೆದಿದೆ ಎಂದು ಶಿಕ್ಷಣ ಸಚಿವ ನಾಗೇಶ್​ ಅಸಮಾಧಾನ ಹೊರಹಾಕಿದರು.

    ಶಾಲಾ-ಕಾಲೇಜುಗಳಲ್ಲಿ ಹಿಜಾಬ್​ ನಿಷೇಧ ಮೂಲಭೂತ ಹಕ್ಕಿನ ಉಲ್ಲಂಘನೆ ಎಂದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿದ ಶಿಕ್ಷಣ ಸಚಿವರು, ರಾಜಕೀಯ ಕ್ಷೇತ್ರವನ್ನು ಹಾಳು ಮಾಡಿ ಆಗಿದೆ. ದಯವಿಟ್ಟು ಶಿಕ್ಷಣ ಕ್ಷೇತ್ರವನ್ನೂ ಹಾಳು ಮಾಡಬೇಡಿ. ಬಾಯಿಗೆ ಬಂದಂತೆ ಮಾತನಾಡಲು ಸಿದ್ದರಾಮಯ್ಯನವರಿಗೆ ನಾಚಿಕೆಯಾಗಬೇಕು. ಶಾಲೆ ಸೂಚಿಸಿದ ಯೂನಿಫಾರ್ಮ್ ಧರಿಸುತ್ತೇವೆ ಎಂದು ಮಕ್ಕಳೇ ಬರೆದುಕೊಟ್ಟಿದ್ದಾರೆ. 95 ಮಕ್ಕಳ ಪೈಕಿ 6 ಮಕ್ಕಳು ಮಾತ್ರ ಹಿಜಾಬ್ ಧರಿಸಿದ್ದಾರೆ. ಒಬ್ಬ ಲಾಯರ್ ಆಗಿ ರೂಲ್ ಬುಕ್ ಓದಿ ಸಿದ್ದರಾಮಯ್ಯನವರೇ. ನಾವೆಲ್ಲರೂ ಒಂದೇ ಎನ್ನಲು ಅವಕಾಶ ಮಾಡಿಕೊಡಿ ಎಂದರು.

    ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳನ್ನು ಹೊರದಬ್ಬಿದ ಕಾಲೇಜು ಆಡಳಿತ ಮಂಡಳಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts